• March 16, 2026

‘ವಿಕ್ರಾಂತ್ ರೋಣ’ ಸಿನಿಮಾ ಪ್ರದರ್ಶನದ ವೇಳೆ ಮಾರಾಮಾರಿ: ನಾಲ್ಕೇ ದಿನದಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಪ್ರದರ್ಶನದ ವೇಳೆ ಚಿಕ್ಕಮಗಳೂರಿನ ಮಿಲನ ಚಿತ್ರಮಂದಿರಲ್ಲಿ ಯುವಕರ ಮಧ್ಯೆ ಹಲ್ಲೆ ನಡೆದಿತ್ತು. ಹಾಡು ಹಗಲೆ ಲಾಂಗು ಮಚ್ಚುಗಳಿಂದ ನಡೆದ ಹಲ್ಲೆ ಇಡೀ ನಗರವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಘಟನೆ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದ ನಾಲ್ಕೇ ದಿನದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಿರೋ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ 11 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಥಿಯೇಟರ್ ನಲ್ಲಿ ಮಾರಾಮಾರಿ ನಡೆದಿತ್ತು. ಎರಡು ಗುಂಪುಗಳ ನಡುವೆ ನಡೆದ ಗಲಾಟೆಯ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಂತರ ತಲೆಮರೆಸಿಕೊಂಡಿದ್ದ ಆರೋಪಿಗಳನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ವಿವರ: ವಿಕ್ರಾಂತ್ ರೋಣ ಸಿನಿಮಾ ವೀಕ್ಷಿಸುತ್ತಿದ್ದ ವೇಳೆ ವ್ಯಕ್ತಿಯೋರ್ವ ಪದೇ ಪದೇ ಹೊರಗೆ ಹೋಗುತ್ತಿದ್ದ. ಇದರಿಂದ ಉಳಿದ ಪ್ರೇಕ್ಷಕರಿಗೆ ತೊಂದರೆಯಾಗುತ್ತಿತ್ತು. ಇದೇ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಸಿನಿಮಾ ಮುಗಿಸಿ ಹೊರ ಬಂದ ಬಳಿಕವು ಮತ್ತೆ ಗಲಾಟೆ ನಡೆದಿದ್ದು ಈ ವೇಳೆ ಕಾರಿನಲ್ಲಿಟ್ಟಿದ್ದ ಲಾಂಗು ಮಚ್ಚು ತೆಗೆದುಕೊಂಡು ಬಂದು ಹಲ್ಲೆ ನಡೆಸಿದ್ದರು.ಘಟನೆಯಲ್ಲಿ ಭರತ್ ಹಾಗೂ ಜೀವನ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಇಬ್ಬರೂ ಹಾಸನದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.  

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now