ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕನ್ನಡ, ತೆಲುಗು ಹಾಗೂ ಹಿಂದಿ ಬಳಿಕ ಇದೀಗ ಮಲಯಾಳಂ ಚಿತ್ರರಂಗಕ್ಕೂ ಎಂಟ್ರಿಕೊಟ್ಟಿದ್ದಾರೆ. ರಶ್ಮಿಕಾ ಮಂದಣ್ಣ ನಟನೆಯ ಮೊದಲ ಮಲಯಾಳಂ ಸಿನಿಮಾ ‘ಸೀತಾ ರಾಮಂ’ ಸಿನಿಮಾ ರಿಲೀಸ್ ಗೆ ತಡೆ ನೀಡಲಾಗಿದ್ದು ಈ ಮೂಲಕ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಶಾಕ್ ಆಗಿದೆ.
ಹನು ರಾಘವಪುಡಿ ನಿರ್ದೇಶನದ `ಸೀತಾ ರಾಮಂ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಆಫ್ರೀನ್ ಎಂಬ ಮುಸ್ಲಿಂ ಯುವತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗ್ಲೆ ಚಿತ್ರದಲ್ಲಿ ಅವರ ಲುಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಸಿನಿಮಾ ನೋಡೋಕೆ ಫ್ಯಾನ್ಸ್ ಕಾದು ಕೂತಿದ್ದು ಚಿತ್ರದ ಬಿಡುಗಡೆಗೆ ತಡೆ ನೀಡಲಾಗಿದೆ. ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುವಂತಹ ಅಂಶಗಳು ಇವೆ ಎಂಬ ಕಾರಣಕ್ಕೆ ಅರಬ್ ರಾಷ್ಟ್ರಗಳಲ್ಲಿ ಚಿತ್ರ ಬಿಡುಗಡೆಗೆ ನಿಷೇಧ ಹೇರಲಾಗಿದೆ.

ಬಹ್ರೇನ್, ಓಮನ್, ಕುವೈತ್, ಖತಾರ್, ಸೌದಿ ಅರೇಬಿಯಾ ಸೇರಿದಂತೆ ಇನ್ನೂ ಕೆಲ ರಾಷ್ಟ್ರಗಳಲ್ಲಿ ಸಿನಿಮಾ ವೀಕ್ಷಿಸಿದ ಸೆನ್ಸಾರ್ ಮಂಡಳಿ ಸದಸ್ಯರು ಸಿನಿಮಾ ಬಿಡುಗಡೆಗೆ ತಡೆ ನೀಡಿದ್ದಾರೆ. ಹೀಗಾಗಿ ಚಿತ್ರತಂಡದವರು ಮತ್ತೊಮ್ಮೆ ಸೆನ್ಸಾರ್‌ಗೆ ಮನವಿ ಸಲ್ಲಿಸಿದ್ದಾರೆ.

ಸೀತಾ ರಾಮಂ ಸಿನಿಮಾದಲ್ಲಿ ಎರಡು ಕಾಲಘಟ್ಟದ ಕಥೆಯಿದ್ದು, ಚಿತ್ರದ ಲುಕ್ ಮತ್ತು ಟ್ರೈಲರ್ ಮೂಲಕ ಸದ್ದು ಮಾಡುತ್ತಿದೆ. ಚಿತ್ರದಲ್ಲಿ ದುಲ್ಕರ್ ಸಲ್ಮಾನ್, ಮೃಣಾಲ್ ಜೊತೆ ನಟಿ ರಶ್ಮಿಕಾ ಮಂದಣ್ಣ ಕೂಡ ಬಣ್ಣ ಹಚ್ಚಿದ್ದಾರೆ. ಇದೇ ಆಗಸ್ಟ್ 5ರಂದು ತೆರೆಗೆ ಬರಲಿದೆ.