ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪ್ರಧಾನಿ ಬಂದಾಗ ಮಾತ್ರ ರಸ್ತೆ ಮಾಡಿಸ್ತೀರಾ, ನಮ್ಮ ಮಕ್ಕಳು ಉತ್ತಮ ರಸ್ತೆಯಲ್ಲಿ ಓಡಾಡಬಾರದಾ: ಪ್ರಕಾಶ್ ರಾಜ್ ಪ್ರಶ್ನೆ
ಮೈಸೂರಿನಲ್ಲಿ ಮಾತನಾಡಿದ ಅವರು, ತೆರಿಗೆ ಹಣ ನಮ್ಮ ದುಡ್ಡು. ನಾನು ವರ್ಷಕ್ಕೆ 38 ಲಕ್ಷ ರೂ. ತೆರಿಗೆ ಕಟ್ಟುತ್ತೇನೆ. ಪ್ರಶ್ನಿಸುವುದು ನಮ್ಮ ಹಕ್ಕು. ಪ್ರಧಾನಿ ಬಂದಾಗ ರಸ್ತೆ ಸರಿ ಮಾಡುತ್ತಾರೆ. ಯಾಕೆ? ನಮ್ಮ ಮಕ್ಕಳು ಒಳ್ಳೆಯ ರಸ್ತೆಯಲ್ಲಿ ಓಡಾಡಬಾರದಾ? ನಮ್ಮ ದುಡ್ಡಿನಲ್ಲಿ ಅವರು ಬದುಕೋದು. ಸಾರ್ವಜನಿಕರ ಹಣದಲ್ಲಿ ಬದುಕುವ ರಾಜಕಾರಣಿಗಳು ಬಂದಾಗ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ರಸ್ತೆ ನಿರ್ಮಾಣ ಮಾಡುತ್ತೀರಾ? ನಮಗಾಗಿ ಯಾಕೆ ಮಾಡಲ್ಲ ಎಂದು ಪ್ರಶ್ನೆ ಮಾಡಿದರು.
ಇದೇ ವೇಳೆ ಮಾತನಾಡಿದ ಅವರು, ನಾನು ಎಂದೂ ಯಾವತ್ತೂ ಪ್ರಗತಿಪರರು, ಚಿಂತಕರ ಪರವಾಗಿರುತ್ತೇನೆ. ನಾನು ಕಣ್ಣಿಗೆ ಕಾಣದೇ ನನ್ನ ಕೆಲಸಗಳನ್ನು ಮಾಡುತ್ತಿದ್ದೇನೆ. ನಾನು ಬೇರೆ ಬೇರೆ ರಾಜ್ಯಗಳಲ್ಲಿ ಇರುತ್ತೇನೆ. ನನ್ನ ವೃತ್ತಿಯ ಜೊತೆಗೆ ಪ್ರಗತಿಪರ ಹೋರಾಟದಲ್ಲಿ ಸದಾ ಸಕ್ರಿಯವಾಗಿರುತ್ತೇನೆ. ಕಣ್ಣಿಗೆ ಕಾಣದೆಯೇ ಕೆಲಸ ಮಾಡುತ್ತಿದ್ದೇನೆ ಎಂದರು.
