ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪುಷ್ಪ 2ನಲ್ಲಿ ನಟಿಸಲು ರಶ್ಮಿಕಾ ಕೇಳಿದ ಸಂಭಾವನೆ ಕೇಳಿ ಬೆಚ್ಚಿ ಬಿದ್ದ ನಿರ್ಮಾಪಕರು
ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರಶ್ಮಿಕಾ ಮಂದಣ್ಣ ಮತ್ತೆಂದು ಹಿಂದಿರುಗಿ ನೋಡಿದ್ದೇ ಇಲ್ಲ. ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳಲ್ಲಿ ನಟಿಸುತ್ತಿರುವ ರಶ್ಮಿಕಾ ಸಂಭಾವನೆ ಕೂಡ ಹೆಚ್ಚಿಸಿಕೊಂಡಿದ್ದಾರೆ. ಅದ್ರಲ್ಲೂ ಪುಷ್ಪ ಸಿನಿಮಾದಲ್ಲಿ ಶ್ರೀವಲ್ಲಿ ಪಾತ್ರದಲ್ಲಿ ಕಾಣಿಸಿಕೊಂಡ ಮೇಲೆ ರಶ್ಮಿಕಾಗೆ ಡಿಮ್ಯಾಂಡ್ ಮತ್ತಷ್ಟು ಹೆಚ್ಚಾಗಿದ್ದು ಪುಷ್ಪ 2ಗೆ ಸಂಭಾವನೆಯನ್ನೂ ಹೆಚ್ಚಿಸಿಕೊಂಡಿದ್ದಾರೆ.
ಈ ಹಿಂದೆ ಪುಷ್ಪ 2 ನಲ್ಲಿ ನಟಿಸಲು ಅಲ್ಲು ಅರ್ಜುನ್ 125 ಕೋಟಿ ಸಂಭಾವನೆ ಕೇಳಿದ್ದಾರೆ ಎಂದು ಸುದ್ದಿಯಾಗಿತ್ತು. ಇದೀಗ ರಶ್ಮಿಕಾ ಪುಷ್ಪ 2 ಚಿತ್ರದಲ್ಲಿ ಶ್ರೀವಲ್ಲಿ ಪಾತ್ರಕ್ಕೆ 5 ಕೋಟಿ ಡಿಮ್ಯಾಂಡ್ ಮಾಡಿದ್ದಾರಂತೆ. ಈ ಹಿಂದೆ ಪುಷ್ಪ ಚಿತ್ರಕ್ಕೆ 1 ಕೋಟಿ ಸಂಭಾವನೆ ಪಡೆದಿದ್ದ ರಶ್ಮಿಕಾ ಪುಷ್ಪ 2 ಗೆ 4 ಕೋಟಿ ಹೆಚ್ಚಿಗೆ ಹಣ ಕೇಳುತ್ತಿದ್ದಾರೆ ಎಂದು ಸುದ್ದಿಯಾಗಿದೆ. ಒಟ್ನಲ್ಲಿ ರಶ್ಮಿಕಾ ಸಂಭಾವನೆ ಕೇಳಿ ನಿರ್ಮಾಪಕರು ಬೆಚ್ಚಿ ಬಿದ್ದಿದ್ದು ಆಕೆ ಕೇಳಿದಷ್ಟು ಕೊಡ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.
