ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ತಮಿಳುನಾಡು ರಾಜ್ಯಪಾಲರನ್ನು ಭೇಟಿಯಾದ ರಜನಿಕಾಂತ್: ರಾಜಕೀಯ ಎಂಟ್ರಿ ಬಗ್ಗೆ ಸೂಪರ್ ಸ್ಟಾರ್ ಹೇಳಿದ್ದೇನು ಗೊತ್ತಾ?
71 ವಯಸ್ಸಿನ ರಜನಿಕಾಂತ್ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಈ ಮಧ್ಯೆ ಇತ್ತೀಚೆಗೆ ತಲೈವನ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು ಅಭಿಮಾನಿಗಳನ್ನು ಚಿಂತಿತರನ್ನಾಗಿ ಮಾಡಿದೆ. ಈ ಮಧ್ಯೆ ರಜನಿ ಮತ್ತೆ ರಾಜಕೀಯದಲ್ಲಿ ಆಕ್ಟೀವ್ ಆಗ್ತಾರಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ.
ತಲೈವ ರಾಜಕೀಯ ಎಂಟ್ರಿ ವದಂತಿಗಳ ಬೆನ್ನಲ್ಲೇ ರಜನಿಕಾಂತ್ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರನ್ನು ಭೇಟಿ ಮಾಡಿದ್ದಾರೆ. ರವಿ ಭೇಟಿಯಾದ ಬೆನ್ನಲ್ಲೇ ತಾವು ರಾಜಕೀಯಕ್ಕೆ ಬರುವುದಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ರಾಜಕೀಯ ಎಂಟ್ರಿ ವದಂತಿಗೆ ಫುಲ್ ಸ್ಟಾಪ್ ನೀಡಿದ್ದಾರೆ.
