• January 1, 2026

ಹನಿಟ್ರ್ಯಾಪ್ ಆರೋಪ: ಸಿನಿಮಾ ರಿಲೀಸ್ ಗೂ ಮುನ್ನವೇ ಸ್ಯಾಂಡಲ್ ವುಡ್ ನಟನ ಬಂಧನ

ಉದ್ಯಮಿಯೊಬ್ಬರಿಗೆ ಹನಿಟ್ರ್ಯಾಮ್ ಮಾಡಿದ ಆರೋಪದ ಮೇಲೆ ಕನ್ನಡದ ಯುವ ನಟ ಯುವ ಅಲಿಯಾಸ್ ಯುವರಾಜ್ ಎಂಬುವವನನ್ನು ಜೆಪಿ ನಗರ ಪೊಲೀಸರು ಬಂಧಿಸಿದ್ದಾರೆ. ಮಿಸ್ಟರ್ ಭೀಮರಾವ್ ಎಂಬ ಸಿನಿಮಾದಲ್ಲಿ ಪ್ರಮುಖ ಪಾತ್ರವಹಿಸಿದ್ದ ನಟ ಇದೀಗ ಹನಿಟ್ರ್ಯಾಮ್ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ. ಇತ್ತೀಚೆಗಷ್ಟೇ ಸಿನಿಮಾದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಿದ್ದು ಸಿನಿಮಾ ರಿಲೀಸ್ ಗೂ ಮುನ್ನವೇ ಆರೋಪಿಗೆ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತ ನಟ ಯುವರಾಜ್ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಾಗಿರೋ ಉದ್ಯಮಿಯೊಂದಿಗೆ ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ. ಇತ್ತೀಚೆಗೆ ಉದ್ಯಮಿಗೆ ಪರಿಚಯ ಆಗಿದ್ದ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದು, ಬಳಿಕ ಉದ್ಯಮಿಯನ್ನು ಭೇಟಿಯಾಗಿ ತಾನು ಕ್ರೈಂ ಪೊಲೀಸ್ ಎಂದು ಸುಳ್ಳು ಹೇಳಿ ಬೆದರಿಸಿದ್ದ. ಯುವತಿಯರ ಜೊತೆಗೆ ಅಶ್ಲೀಲ ಮೆಸೇಜ್ ಮಾಡಿದ್ದ ಕಾರಣ ಕೇಸ್ ದಾಖಲಾಗಿದ್ದು ಕೇಸ್ ನಿಲ್ಲಿಸಬೇಕು ಎಂದರೆ ಹಣ ನೀಡುವಂತೆ ಬೆದರಿಕೆ ಹಾಕಿದ್ದ ಎಂಬ ಆರೋಪ ಕೇಳಿ ಬಂದಿದೆ. ನಟನ ಬೆದರಿಕೆಗೆ ಹೆದರಿದ ಉದ್ಯಮಿ ಹಂತ ಹಂತವಾಗಿ ಹದಿನಾಲ್ಕು ಲಕ್ಷಕ್ಕೂ ಅಧಿಕ ಹಣ ನೀಡಿದ್ದಾರೆ. ಬಳಿಕ ಅನುಮಾನಗೊಂಡ ಉದ್ಯಮಿ ಹಲಸೂರು ಗೇಟ್ ಠಾಣೆಗೆ ದೂರು ನೀಡಿದ್ದು, ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now