ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸ್ವಾತಂತ್ರ್ಯ ದಿನಾಚರಣೆಗೆ ಕಾಂತಾರ ಸಿನಿಮಾದಿಂದ ಮೊದಲ ಹಾಡು ಬಿಡುಗಡೆ
ಪ್ರಮೋದ್ ಮರವಂತೆ ರಚಿಸಿರುವ “ಸಿಂಗಾರ ಸಿರಿಯೆ” ಎಂಬ ಮನಮೋಹಕ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಲಿದ್ದು, ಹಾಡಿನಲ್ಲಿ ಜಾನಪದ ಸೊಗಡನ್ನು ಎತ್ತಿಹಿಡಿಯಲಾಗಿದೆ. ಗಾಯಕ ವಿಜಯ್ ಪ್ರಕಾಶ್, ಅನನ್ಯ ಭಟ್ ಹಾಗೂ ನಾಗರಾಜ್ ಪನ್ನಾರ್ ವಲ್ಟುರ್ ಅವರ ಕಂಠಸಿರಿಯಲ್ಲಿ ಮೂಡಿಬಂದಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.
ಈಗಾಗಲೇ ಕಾಂತರ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು ಸಾಕಷ್ಟು ನಿರೀಕ್ಷೆ ಮೂಡಿಸಿದೆ. ರಿಷಬ್ ಶೆಟ್ಟಿ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ಬಹುತೇಕವಾಗಿ ಹಿಟ್ ಆಗುತ್ತಿರುವುದರಿಂದ, ಈ ಸಿನಿಮಾದ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಸೆಪ್ಟೆಂಬರ್ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
