ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಲಾರಸಿಕರು ಮೆಚ್ಚಿಕೊಂಡ ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾದ ಸಿಂಗಾರ ಸಿರಿಯೇ ಹಾಡು
ಅಜನೀಶ್ ಲೋಕನಾಥ್ ಸಂಗೀತ ನೀಡಿ, ಪ್ರಮೋದ್ ಮರವಂತೆ ಬರೆದಿರುವ “ಸಿಂಗಾರ ಸಿರಿಯೆ” ಹಾಡಿನಲ್ಲಿ ಕರುನಾಡ ಸಂಸ್ಕ್ರತಿಯ ಭವ್ಯ ಪರಂಪರೆಯನ್ನು ಮನಮುಟ್ಟುವಂತೆ ತೋರಿದ್ದಾರೆ ನಿರ್ದೇಶಕ ರಿಷಬ್ ಶೆಟ್ಟಿ. ಹಲವು ಜನಪದ ನೃತ್ಯಗಳ ಹಿನ್ನೆಲೆಯಲ್ಲಿ ನಾಯಕ, ನಾಯಕಿಗೆ ಪ್ರೇಮದ ವಿಷಯ ತಿಳಿಸುವ ರೀತಿ ಈ ಹಾಡಿನಲ್ಲಿ ಸೊಗಸಾಗಿ ಮೂಡಿಬಂದಿದೆ.
ವಿಜಯ್ ಪ್ರಕಾಶ್, ಅನನ್ಯ ಭಟ್ ಹಾಗೂ ಪನ್ನಾರ್ ವಲ್ಟುರ್ ಅವರ ಇಂಪಾದ ಗಾಯನ ಹಾಡಿನ ಶ್ರೀಮಂತಿಕೆಯನ್ನು ಮತ್ತಷ್ಟು ಹೆಚ್ಚಿಸಿದೆ. ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಅವರ ಅಭಿನಯ ಅದ್ಭುತವಾಗಿದೆ. ಹಾಡು ಬಿಡುಗಡೆಯಾದ ಕೆಲವೇ ಹೊತ್ತಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ವೀಕ್ಷಣೆಯಾಗಿ ಎಲ್ಲರ ಮೆಚ್ಚುಗೆ ಪಡೆಯುತ್ತಿದೆ. ಚಿತ್ರ ಯಾವಾಗ ತೆರೆಗೆ ಬರುವುದೊ? ಎಂಬ ಕಾತುರ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
