• March 18, 2026

17ರ ಬಾಲಕಿ ಮೇಲೆ ಆರು ಮಂದಿನಿಂದ ಅತ್ಯಾಚಾರ: ಆರೋಪಿಗಳ ಬಂಧನ

ಮುಂಬೈ: 17 ವರ್ಷದ ವಿದ್ಯಾರ್ಥಿನಿ ಮೇಲೆ ಓರ್ವ ಅಪ್ರಾಪ್ತ ಬಾಲಕ ಹಾಗೂ ಐವರು ಪುರುಷರು ಹಲವು ಬಾರಿ ಅತ್ಯಾಚಾರವೆಸಗಿದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯನ್ನು ಆರೋಪಿಯೊರ್ವ ಜಮೀನಿಗೆ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಅಲ್ಲಿ ಆರೋಪಿಯ ಜೊತೆಗೆ ಉಳಿದ ಐವರು ಸೇರಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳ ಪೈಕಿ ಐವರು 19 ರಿಂದ 33 ವರ್ಷ ಒಳಗಿನವರಾಗಿದ್ದು, ಮತ್ತೋರ್ವ ಆರೋಪಿ ಅಪ್ರಾಪ್ತನಾಗಿದ್ದಾನೆ. ಘಟನೆಗೆ ಕುರಿತು ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು ಆರು ಮಂದಿ ಆರೋಪಿಯನ್ನು ಬಂಧಿಸಿದ್ದಾರೆ. ಆರು ಜನ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಬಳಿಕ  ಆ. 17ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಅಪ್ರಾಪ್ತ ಆರೋಪಿಯನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now