• January 1, 2026

ಬಿಡುಗಡೆ ಆದ ಎರಡೇ ದಿನಕ್ಕೆ 18 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದ ಕಾಂತಾರ ಸಿನಿಮಾದ ಸಿಂಗಾರ ಸಿರಿಯೇ ಹಾಡು

ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಸಖತ್ ಸದ್ದು ಮಾಡ್ತಿದ್ದಾರೆ. ಒಂದರ ಹಿಂದೊಂದರಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿರೋ ರಿಷಬ್ ಶೆಟ್ಟಿ ಕಾಂತಾರ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಕಾಂತಾರ ಸಿನಿಮಾದ ಮೊದಲ ಹಾಡು ಬಿಡುಗಡೆ ಆಗಿದ್ದು 18 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ಕರಾವಳಿ ಸೊಗಡಿನಲ್ಲಿ ಬ್ಯಾಕ್ ಗ್ರೌಂಡ್ ನಲ್ಲಿ ಮೂಡಿಬಂದಿರುವ ಸಿಂಗಾರ ಸಿರಿಯೇ ಹಾಡಿಗೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿರೋ, ಪ್ರಮೋದ್ ಮರವಂತೆ ಬರೆದಿರೋ ಸಿಂಗಾರ ಸಿರಿಯೆ ಎಂಬ ಮನ ಮೋಹಕ ಹಾಡಿನಲ್ಲಿ ಜಾನಪದ ಸೊಗಡು ಮೇಳೈಸಿದೆ. ಕಳೆದ ಎರಡು ದಿನಗಳ ಹಿಂದೆ ಬಿಡುಗಡೆ ಆಗಿರೋ ಈ ಹಾಡು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡ್ತಿದೆ. ಹಾಡಿನಲ್ಲಿ ಕರುನಾಡ ಸಂಸ್ಕ್ರತಿ ಹಾಗು ಭವ್ಯ ಪರಂಪರೆಯನ್ನು ಮನಮುಟ್ಟುವಂತೆ ನಿರ್ದೇಶಕ ರಿಷಬ್ ಶೆಟ್ಟಿ ಪ್ರದರ್ಶಿಸಿದ್ದಾರೆ. ವಿಜಯ್ ಪ್ರಕಾಶ್, ಅನನ್ಯ ಭಟ್ ಹಾಗೂ ಪನ್ನಾರ್ ವಲ್ಟುರ್ ಕಂಠಸಿರಿ ಮೂಡಿ ಬಂದಿರುವ ಈ ಹಾಡು ಸಾಮಾಜಿಕ ಜಾಲಾ ತಾಣದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರೋ ಕಾಂತಾರಾ ಸಿನಿಮಾವನ್ನು ಹೊಂಬಾಳೆ ಬ್ಯಾನರ್ ಮೂಲಕ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಕಾಂತರ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು ಸಾಕಷ್ಟು ನಿರೀಕ್ಷೆ ಮೂಡಿಸಿದೆ. ರಿಷಬ್ ಶೆಟ್ಟಿ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ಬಹುತೇಕವಾಗಿ ಹಿಟ್ ಆಗುತ್ತಿರುವುದರಿಂದ, ಈ ಸಿನಿಮಾದ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ವಿಭಿನ್ನ ಕಥಾಹಂದರ ಹೊಂದಿರುವ ಕಾಂತಾರ ಸಿನಿಮಾ ಸೆಪ್ಟೆಂಬರ್ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now