• January 1, 2026

ಹಾಸ್ಯ ನಟ ರಾಜು ಶ್ರೀವಾತ್ಸವ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ: ನಿಷ್ಕ್ರಿಯಗೊಂಡ ಮೆದಳು

ಮುಂಬೈನಲ್ಲಿ ಜಿಮ್ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ಖ್ಯಾನ ಹಾಸ್ಯನಟ ರಾಜು ಶ್ರೀವಾತ್ಸವ್ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ. ವೆಂಟಿಲೇಟರ್ ನಲ್ಲಿ ರಾಜು ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದ್ದು, ರಾಜು ಅವರನ್ನು ಉಳಿಸಿಕೊಳ್ಳುವ ಸರ್ವ ಪ್ರಯುತ್ನಗಳನ್ನು ವೈದ್ಯರು ಮಾಡುತ್ತಿದ್ದಾರೆ. ಕಳೆದ ಆಗಸ್ಟ್ 10ರಂದು ಜಿಮ್ ಮಾಡುತ್ತಿದ್ದ ವೇಳೆ ರಾಜು ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ರಾಜು ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ. ವೈದ್ಯರು ನೀಡುತ್ತಿರುವ ಯಾವುದೇ ಔಷಧಿಗಳಿಗೂ ರಾಜು ಪ್ರತಿಕ್ರಿಯಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ರಾಜು ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ವೈದ್ಯರಾಗಲಿ ಅಥವಾ ರಾಜು ಕುಟುಂಬ ಸದಸ್ಯರಾಗಲಿದೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ರಾಜು ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಕಲ ಪ್ರಯತ್ನವನ್ನು ಮಾಡುತ್ತಿದ್ದಾರೆ. ಬಾಜಿಗರ್, ಮೈನೆ ಪ್ಯಾರ್ ಕಿಯಾ, ಬಾಂಬೆ ಟು ಗೋವಾ ಸೇರಿದಂತೆ ಹಲವು ಹಿಂದಿ ಸಿನಿಮಾಗಳಲ್ಲಿ ಹಾಸ್ಯ ನಟರಾಗಿ ಗುರುತಿಸಿಕೊಂಡಿರುವ ರಾಜು ಶ್ರೀವಾತ್ಸವ್ ತಮ್ಮದೇ ಆದ ಮ್ಯಾನರಿಸಂ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಸಿನಿಮಾಗಳಲ್ಲಿ ಮಾತ್ರವಲ್ಲದೆ, ಸ್ಟ್ಯಾಂಡ್ ಅಪ್ ಕಾಮಿಡಿಯನ್ ಆಗಿದ್ದು, ಹಿಂದಿ ಬಿಗ್ ಬಾಸ್ ಎಂಟ್ರಿಕೊಟ್ಟಿದ್ದಾರೆ. ರಾಜು ಶ್ರೀವಾತ್ಸವ್ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎನ್ನುವುದು ಅವರ ಅಭಿಮಾನಿಗಳ ಹಾರೈಕೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now