• January 2, 2026

ಬೆಂಗಳೂರಿಗೆ ಬಂದಾಗೆಲ್ಲಾ ಪುನೀತ್ ಅಣ್ಣನನ್ನು ಭೇಟಿ ಮಾಡುತ್ತಿದ್ದೆ: ವಿಜಯ್ ದೇವರಕೊಂಡ

ನಟ ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ಪೂರಿ ಜಗನ್ನಾಥ್ ಕಾಂಬಿನೇಷನ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಲೈಗರ್ ಸದ್ಯದಲ್ಲೇ ತೆರೆಗೆ ಬರಲಿದೆ. ಇದೇ ಆಗಸ್ಟ್ 25ಕ್ಕೆ ಸಿನಿಮಾ ಬಿಡುಗಡೆ ಆಗಲಿದ್ದು ಈ ಹಿನ್ನೆಲೆಯಲ್ಲಿ ಇಡೀ ಚಿತ್ರತಂಡ ಪ್ರಮೋಷನ್ ಕಾರ್ಯದಲ್ಲಿ ಬ್ಯುಸಿಯಾಗಿದೆ. ಚಿತ್ರದ ಪ್ರಮೋಷನ್ ಗಾಗಿ ಬೆಂಗಳೂರಿಗೆ ಬಂದಿದ್ದ ವಿಜಯ್ ದೇವರಕೊಂಡ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಾಂದವ್ಯವನ್ನು ಮೆಲುಕು ಹಾಕಿದರು. ನಾನು ಬೆಂಗಳೂರಿಗೆ ಬಂದಾಗಲೆಲ್ಲ ಪುನೀತ್ ಅಣ್ಣನನ್ನು ಮೀಟ್ ಮಾಡಿ ಹೋಗುತ್ತಿದ್ದೆ. ಅವರು ನನ್ನ ಸಿನಿಮಾಗಳನ್ನು ನೋಡಿ ಫೋನ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಜೊತೆಗೆ ಶಿವಣ್ಣ ಕೂಡ ನನ್ನ ಸಿನಿಮಾ ನೋಡಿ ಫೋನ್ ಮಾಡಿ ಮಾತನಾಡಿದ್ದು ಇದೆ ಎಂದು ಡಾ ರಾಜ್​ಕುಮಾರ್ ಕುಟುಂಬದೊಂದಿಗೆ ಇರುವ ಒಡನಾಟವನ್ನು ತಿಳಿಸಿದರು. ವಿಜಯ್ ದೇವರಕೊಂಡ-ಪುರಿ ಜಗನ್ನಾಥ್ ಕ್ರೇಜಿ ಕಾಂಬೋ ಆಗಿದ್ದು, ಇಡೀ ಚಿತ್ರ ಜಗತ್ತು ಕಾತರದಿಂದ ಕಾಯುತ್ತಿದೆ. ಇದರ ಜೊತೆಗೆ ಆಗಾಗ ಹೊರಬರುತ್ತಿರುವ ಸಿನಿಮಾ ಕುರಿತ ಕೆಲವು ವಿಷಯಗಳು ಸಿನಿಪ್ರಿಯರ ಆಸಕ್ತಿಯನ್ನು ದ್ವಿಗುಣಗೊಳಿಸುತ್ತಿವೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now