ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಗ್ನ ಪೋಟೋ ಶೂಟ್ ವಿವಾದ: ವಿಚಾರಣೆಗೆ ಹಾಜರಾಗಲು ಕಾಲವಕಾಶ ಕೇಳಿದ ರಣವೀರ್ ಸಿಂಗ್
ರಣವೀರ್ ಸಿಂಗ್ ರ ನಗ್ನ ಫೋಟೋಶೂಟ್ನಿಂದ ಮಹಿಳೆಯರ ಗೌರವಕ್ಕೆ ಧಕ್ಕೆ ಆಗಿದೆ ಎಂದು ಆರೋಪಿಸಿ ಕೆಲವರು ದೂರು ನೀಡಿದ್ದರು. ಐಪಿಸಿ ಸೆಕ್ಷನ್ 292, 293 ಹಾಗೂ 509ರ ಅಡಿಯಲ್ಲಿ ರಣವೀರ್ ಸಿಂಗ್ ವಿರುದ್ಧ ಕೇಸ್ ದಾಖಲಾಗಿದೆ. ಆ ಕುರಿತು ವಿಚಾರಣೆ ನಡೆಸುವ ಸಲುವಾಗಿ ರಣವೀರ್ ಸಿಂಗ್ಗೆ ಪೊಲೀಸರು ಸಮನ್ಸ್ ನೀಡಿದ್ದರು. ಸಮನ್ಸ್ ನೀಡಲು ಅವರ ಮನೆಗೆ ತೆರಳಿದ್ದಾಗ ಅವರು ಅಲ್ಲಿ ಇರಲಿಲ್ಲ. ಆಗಸ್ಟ್ 22ರಂದು ಮುಂಬೈನ ಬೇಂಬೂರ್ ಪೊಲೀಸ್ ಠಾಣೆಗೆ ಹಾಜರಾಗುವಂತೆ ಸಮನ್ಸ್ನಲ್ಲಿ ತಿಳಿಸಲಾಗಿತ್ತು.
ಜುಲೈ 22ರಂದು ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ನಗ್ನ ಫೋಟೋಗಳನ್ನು ಶೇರ್ ಮಾಡಿಕೊಂಡರು. ಇದನ್ನು ಕಂಡು ಕೆಲವರು ಅಸಮಾಧಾನ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ರಣವೀರ್ ಸಿಂಗ್ ಪರ ಮಾತನಾಡಿದ್ದಾರೆ. ಅಂತಿಮವಾಗಿ ಈ ಕೇಸ್ ಏನಾಗಲಿದೆ ಎಂಬ ಕೌತುಕ ಮೂಡಿದೆ.
