• March 14, 2026

ಜೈಲರ್ ಲುಕ್ ನಲ್ಲಿ ರಜನಿಕಾಂತ್: ಫೋಸ್ಟರ್ ನೋಡಿ ಕ್ಲೀನ್ ಬೋಲ್ಡ್ ಆದ ಅಭಿಮಾನಿಗಳು

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 169ನೇ ಸಿನಿಮಾ ಜೈಲರ್ ಪೋಸ್ಟರ್ ರಿಲೀಸ್ ಆಗಿದೆ. ಜೈಲರ್ ಫೋಸ್ಟರ್ ನಲ್ಲಿ ತಲೈವಾನ ಲುಕ್ ನೋಡಿ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಜೊತೆಗೆ ಈ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ನಟಿಸ್ತಿದ್ದು ಶಿವಣ್ಣನ ಲುಕ್ ಹೇಗಿರಲಿದೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಇಂದು ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ಸೆಟ್ಟೇರಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ನಿರ್ಮಾಣ ಸಂಸ್ಥೆಯಾದ ಸನ್ ಪಿಕ್ಚರ್ಸ್ ರಜನಿಕಾಂತ್ ಅವರ ಫಸ್ಟ್ ಪೋಸ್ಟರ್ ರಿಲೀಸ್ ಮಾಡಿ ಅಭಿಮಾನಿಗಳಿಗೆ ಬಿಗ್ ಸರ್ ಪ್ರೈಸ್ ನೀಡಿದೆ. ಈಗಾಗ್ಲೆ ಸಾಕಷ್ಟು ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದ ರಜನಿಕಾಂತ್ ಇದೀಗ ಜೈಲರ್ ಸಿನಿಮಾದಲ್ಲಿ ನಿಭಾಯಿಸುತ್ತಿರುವ ಪಾತ್ರದ ಬಗ್ಗೆ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಜೊತೆಗೆ ಚಿತ್ರದಲ್ಲಿ ನಟ ಶಿವರಾಜ್ ಕುಮಾರ್ ಕೂಡ ಕಾಣಿಸಿಕೊಳ್ತಿದ್ದು ಸದ್ಯದಲ್ಲೇ ಅವರ ಲುಕ್ ಕೂಡ ಬಿಡುಗಡೆ ಆಗಲಿದೆ. ಹೀಗಾಗಿ ಹ್ಯಾಟ್ರಿಕ್ ಹೀರೋ ಅಭಿಮಾನಿಗಳು ಸಾಕಷ್ಟು ಕುತೂಹಲದಿಂದ ಕಾಯ್ತಿದ್ದಾರೆ. ಇದೇ ಮೊದಲ ಬಾರಿಗೆ ರಜನಿಕಾಂತ್​ ಮತ್ತು ಶಿವರಾಜ್​ಕುಮಾರ್​ ಒಂದೇ ಸಿನಿಮಾದಲ್ಲಿ ನಟಿಸುತ್ತಿರುವುದರಿಂದ ಸಖತ್​ ಹೈಪ್​ ಸೃಷ್ಟಿ ಆಗಿದೆ. ‘ಜೈಲರ್​’ ಚಿತ್ರದಲ್ಲಿ ರಜನಿಕಾಂತ್​ ಎದುರು ಶಿವಣ್ಣ ವಿಲನ್​ ಆಗಿ ಕಾಣಿಸಿಕೊಳ್ಳುತ್ತಾರೆ ಎಂಬ ಮಾತು ಕೂಡ ಕೇಳಿಬಂದಿದೆ. ಆದ್ರೆ ಈ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿ ರಿವೀಲ್ ಮಾಡಿಲ್ಲ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now