ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಾಲಿವುಡ್ ಸ್ಟಾರ್ ನಟನ ಸಿನಿಮಾಗೆ ನಾಯಕಿಯಾದ ನಟಿ ರಶ್ಮಿಕಾ ಮಂದಣ್ಣ
ಬಾಲಿವುಡ್ ಸಿನಿ ರಂಗದಲ್ಲಿ ಸಾಕಷ್ಟು ಭೇಡಿಕೆಯ ನಟಿಯಾಗಿ ಗುರುತಿಸಿಕೊಂಡಿರುವ ರಶ್ಮಿಕಾ ಮಂದಣ್ಣ ನಟನೆಯ ‘ಮಿಷನ್ ಮಜ್ನು’ ಹಾಗೂ ‘ಗುಡ್ಬೈ’ ಚಿತ್ರಗಳು ರಿಲೀಸ್ಗೆ ರೆಡಿ ಇದೆ. ‘ಮಿಷನ್ ಮಜ್ನು’ ಚಿತ್ರಕ್ಕೆ ಸಿದ್ದಾರ್ಥ್ ಮಲ್ಹೋತ್ರಾ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ‘ಗುಡ್ಬೈ’ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಜೊತೆ ರಶ್ಮಿಕಾ ಸ್ಕ್ರೀನ್ ಶೇರ್ ಮಾಡಿದ್ದಾರೆ.
ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಚಿತ್ರದಲ್ಲೂ ರಶ್ಮಿಕಾ ನಟಿಸುತ್ತಿದ್ದು, ಈಗಾಗಲೇ ಚಿತ್ರದ ಶೂಟಿಂಗ್ ಆರಂಭವಾಗಿದೆ. ಈ ಮಧ್ಯೆ ರಶ್ಮಿಕಾ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಬಾಲಿವುಡ್ನಲ್ಲಿ ಛಾಪು ಮೂಡಿಸಿರುವ ಕಾರ್ತಿಕ್ ಆರ್ಯನ್ ಚಿತ್ರಕ್ಕೆ ರಶ್ಮಿಕಾ ನಾಯಕಿ ಎಂಬ ಸುದ್ದಿ ಹರಿದಾಡುತ್ತಿದೆ.
