ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
“ಉತ್ತರ ಕಾಂಡ”ದ ನಾಯಕನಾದ ಡಾಲಿ ಧನಂಜಯ್
“ದಯವಿಟ್ಟು ಗಮನಿಸಿ”, ” ರತ್ನನ ಪ್ರಪಂಚ” ದಂತಹ ವಿಭಿನ್ನ ಚಿತ್ರಗಳ ನಿರ್ದೇಶಕ ರೋಹಿತ್ ಪದಕಿ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಕೆಲವು ದಿನಗಳ ಹಿಂದೆ ಈ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಆದರೆ ನಾಯಕ ಯಾರು ? ಎಂಬ ಕುತೂಹಲವಿತ್ತು. ಆ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಧನಂಜಯ ಅವರ ಹುಟ್ಟುಹಬ್ಬದ ದಿನದಂದೇ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಈ ಸುದ್ದಿಯನ್ನು ಹಂಚಿಕೊಂಡು, ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.
“ಉತ್ತರ ಕಾಂಡ” ಉತ್ತರ ಕರ್ನಾಟಕದ ಗ್ಯಾಂಗ್ ಸ್ಟರ್ ಕಥೆ ಆಧರಿಸಿದೆ. ಉತ್ತರ ಕರ್ನಾಟಕದಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆಯುತ್ತದೆ. “ಹೊಯ್ಸಳ” ಚಿತ್ರದ ನಂತರ, ಜನವರಿಯಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗುತ್ತದೆ ಎಂದು ನಿರ್ದೇಶಕ ರೋಹಿತ್ ತಿಳಿಸಿದ್ದಾರೆ.
ಚರಣ್ ರಾಜ್ “ಉತ್ತರ ಕಾಂಡ” ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಸ್ವಾಮಿ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಸಂಕಲನ ಹಾಗೂ ವಿಶ್ವಾಸ್ ಅವರ ಕಲಾ ನಿರ್ದೇಶನವಿರುತ್ತದೆ.
