• January 1, 2026

ತಂದೆಯ ಆರೋಗ್ಯ ಸ್ಥಿರವಾಗಿದೆ, ವದಂತಿ ಹಬ್ಬಿಸಬೇಡಿ: ನಟ ರಾಜು ಶ್ರೀವಾತ್ಸವ್ ಪುತ್ರಿ ಅಂತರ

ನವದೆಹಲಿ: ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದು ಹೃದಯಾಘಾತಕೊಳಗಾಗಿ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ಖ್ಯಾತ ಹಾಸ್ಯ ಕಲಾವಿದ ರಾಜು ಶ್ರೀವಾಸ್ತವ್ ಸ್ಥಿತಿ ಗಂಭೀರವಾಗಿದೆ. ರಾಜು ಶ್ರೀವಾಸ್ತವ್ ಯಾವುದೇ ಚಿಕಿತ್ಸೆಗೂ ಸ್ಪಂದಿಸುತ್ತಿಲ್ಲ,  ಈಗಾಗಲೇ ಕೋಮಗೆ ತೆರಳಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ರಾಜು ಆರೋಗ್ಯದ ಕುರಿತು ರಾಜು ಪುತ್ರಿ ಅಂತರಾ ಶ್ರೀವಾಸ್ತವ್ ಸ್ಪಷ್ಟನೆ ನೀಡಿದ್ದಾರೆ. ತಂದೆಯ ಆರೋಗ್ಯ ಸ್ಥಿರವಾಗಿದೆ. ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ತಂದೆಯ ಆರೋಗ್ಯದ ಕುರಿತು ಯಾವುದೇ ರೀತಿಯ ವದಂತಿ ಹಬ್ಬಿಸಬೇಡಿ ಎಂದು ಅಭಿಮಾನಿಗಳು ಹಾಗೂ ಮಾಧ್ಯಮಗಳಿಗೂ ವಿನಂತಿ ಮಾಡಿದ್ದಾರೆ. ಕಳೆದ 15 ದಿನಗಳ ಹಿಂದೆ ಜಿಮ್​ನಲ್ಲಿ ವರ್ಕೌಟ್ ಮಾಡ್ತಿದ್ದ ವೇಳೆ ಕುಸಿದು  ಬಿದ್ದ ರಾಶ್ರೀ ಶ್ರೀವಾತ್ಸವ್ ಅವರನ್ನು ತಕ್ಷಣವೇ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಏಮ್ಸ್ ನ ತೀವ್ರ ನಿಗಾ ಘಟಕದಲ್ಲಿ ರಾಜು ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಈಗಾಗಲೇ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಮಾಡಲಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆಂದು ತಿಳಿಸಿದ್ದಾರೆ. ಡಾ.ನಿತೀಶ್ ನ್ಯಾಯ್ ನೇತೃತ್ವದ ಹೃದ್ರೋಗ ಮತ್ತು ತುರ್ತು ವಿಭಾಗದ ಎಐಐಎಂಎಸ್ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ತಂದೆಗೆ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರೆದಿದೆ. ನಮಗೆ ಯಾವುದೇ ನಕಾರಾತ್ಮಕ ಶಕ್ತಿ ಬೇಡ. ಸಕಾರಾತ್ಮಕವಾಗಿ ಚಿಂತಿಸುವ ಶಕ್ತಿ ಬೇಕು. ಅವರು ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಪ್ರಾರ್ಥಿಸಿ ಎಂದು ಅಂತರ ಮನವಿ ಮಾಡಿಕೊಂಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now