• January 1, 2026

ಟಾಪ್ 10 ಹೀರೋಗಳ ಪಟ್ಟಿ ಬಿಡುಗಡೆ: ರಾಕಿಂಗ್ ಸ್ಟಾರ್ ಯಶ್ ಗೆ ಎಷ್ಟನೇ ಸ್ಥಾನ?

ಸ್ಯಾಂಡಲ್ ವುಡ್ ಸಿನಿಮಾ ರಂಗ ಪರಭಾಷೆಯ ಚಿತ್ರರಂಗಕ್ಕೆ ಸೆಡ್ಡು ಹೊಡೆಯುವ ಮಟ್ಟಕ್ಕೆ ಬೆಳೆಯುತ್ತಿದ್ದೆ. ಇತ್ತೀಚೆಗೆ ತೆರೆಕಂಡ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್2 ಹಾಗೂ 777 ಚಾರ್ಲಿ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿ ಪರಭಾಷೆಯ ಮಂದಿಯನ್ನು ಗಾಂಧಿನಗರದತ್ತ ತಿರುಗಿ ನೋಡುವಂತೆ ಮಾಡಿವೆ. ಇದೀಗ ಭಾರತದ ಎಲ್ಲಾ ಸ್ಟಾರ್ಸ್​​ಗಳಿಗೆ ರ್ಯಾಂಕಿಂಗ್ ನೀಡಲಾಗಿದೆ. ಒರ್ಮಾಕ್ಸ್ ಮೀಡಿಯಾ ಈ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ಪಟ್ಟಿ ಬಿಡುಗಡೆ ಮಾಡಿದೆ. 2022ರ ಜುಲೈ ಅವಧಿಯ ಭಾರತದ ಟಾಪ್ 10 ಜನಪ್ರಿಯ ನಟರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ದಳಪತಿ ವಿಜಯ್ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. 2ನೇ ಸ್ಥಾನದಲ್ಲಿ ಪ್ರಭಾಸ್​, 3ನೇ ಸ್ಥಾನದಲ್ಲಿ ಜೂನಿಯರ್ ಎನ್​ಟಿಆರ್, 4ನೇ ಸ್ಥಾನದಲ್ಲಿ ಅಲ್ಲು ಅರ್ಜುನ್ ಇದ್ದಾರೆ. 5ನೇ ಸ್ಥಾನದಲ್ಲಿ ರಾಕಿಂಗ್​ ಸ್ಟಾರ್ ಯಶ್ ಇದ್ದರೆ, ​6ನೇ ಸ್ಥಾನದಲ್ಲಿ ರಾಮ್ ಚರಣ್, 7ನೇ ಸ್ಥಾನದಲ್ಲಿ ಅಕ್ಷಯ್ ಕುಮಾರ್, 8ನೇ ಸ್ಥಾನದಲ್ಲಿ ಮಹೇಶ್ ಬಾಬು, 9ನೇ ಸ್ಥಾನದಲ್ಲಿ ಸೂರ್ಯ, 10ನೇ ಸ್ಥಾನದಲ್ಲಿ ಅಜಿತ್ ಕುಮಾರ್ ಇದ್ದಾರೆ. ಕೆಜಿಎಫ್ 2 ಸಿನಿಮಾದ ಮೂಲಕ ಯಶ್ ದೇಶ ವಿದೇಶದಲ್ಲೂ ಸದ್ದು ಮಾಡ್ತಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡಿದ್ದು ಇಡೀ ಚಿತ್ರತಂಡಕ್ಕೆ ಸಾಕಷ್ಟು ಹೆಸ್ರು ತಂದು ಕೊಟ್ಟಿದೆ. ಈ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ. ಟಾಪ್ 10 ಪಟ್ಟಿಯಲ್ಲಿ ಕನ್ನಡ ಚಿತ್ರರಂಗದಿಂದ ಸ್ಥಾನ ಪಡೆದ ಏಕೈಕ ನಟ ಎಂಬ ಹೆಗ್ಗಳಿಕೆ ರಾಕಿಂಗ್ ಸ್ಟಾರ್​ಗೆ ಸಿಕ್ಕಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now