• March 14, 2026

ಬಾಲಿವುಡ್ ನ ಖ್ಯಾತ ನಿರ್ದೇಶಕ, ನಿರ್ಮಾಪಕ ಸಾವನ್ ಕುಮಾರ್ ನಿಧನ

ಬಾಲಿವುಡ್ ನ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಸಾವನ್ ಕುಮಾರ್ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಕಳೆದ ದಿನ ದಿನಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಸಾವನ್ ಕುಮಾರ್ ರನ್ನು ಮುಂಬೈನ ಕೋಕಿಲಾಬೆನ್ ಧೀರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬುಧವಾರ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಚಿಕಿತ್ಸೆ ಫಲಕಾರಿ ಆಗದೆ ಗುರುರಾವ ಸಂಜೆ ಕೊನೆಯುಸಿರೆಳೆದಿದ್ದಾರೆ. ಸಾವನ್ ನಿಧನದ ಕುರಿತು ಸೋದರಳಿಗೆ ನವೀನ್ ತಿಳಿಸಿದ್ದು, ‘ಸಾವನ್ ಇಂದು ಸಂಜೆ ನಿಧನ ಹೊಂದಿದ್ದಾರೆ. ಅವರ ಹೃದಯ ಕೆಲಸ ಮಾಡುವುದು ನಿಲ್ಲಿಸಿದೆ’ ಎಂದಿದ್ದಾರೆ. 1967ರಲ್ಲಿ ನಿರ್ಮಾಪಕರಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಸಾವನ್, ‘ನೌನಿಹಾಲ್’ ‘ಗೋಮ್ಟಿ ಕೆ ಕಿನಾರೆ’ ‘ಸೌತನ್​’ ಸೇರಿದಂತೆ ಸಾಕಷ್ಟು ಸಿನಿಮಾಗಳನ್ನು ನಿರ್ದೇಶನ ಹಾಗೂ ನಿರ್ಮಾಣ ಮಾಡಿದ್ದರು. ನಟ ಸಲ್ಮಾನ್ ಖಾನ್ ಜೊತೆ ಉತ್ತಮ ಬಾಂದವ್ಯ ಹೊಂದಿದ್ದ ಸಾವನ್ ಸಲ್ಲು ಜೊತೆ ‘ಸನಮ್ ಬೇವಫಾ’ ‘ಚಾಂದ್ ಕಾ ತುಕ್ಡಾ’ ಹಾಗೂ ‘ಸಾವನ್​’ ಚಿತ್ರಗಳನ್ನು ಮಾಡಿದ್ದರು. ಸಿನಿಮಾ ನಿರ್ದೇಶನ ಹಾಗೂ ನಿರ್ಮಾಣದ ಜೊತೆಗೆ ಗೀತಾ ಸಾಹಿತಿ ಆಗಿಯೂ ಸಾವನ್ ಹೆಸರು ಮಾಡಿದ್ದರು. ಸಾವನ್ ನಿಧನಕ್ಕೆ ಬಾಲಿವುಡ್ ನ ಅನೇಕರು ಕಂಬನಿ ಮಿಡಿದಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now