ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಾಷ್ಟ್ರಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ಮೆಚ್ಚಿಕೊಂಡ ಸಚಿವ ಮುರುಗೇಶ್ ನಿರಾಣಿ, ಬಿ.ವೈ.ವಿಜಯೇಂದ್ರ
ಬಿ.ವೈ.ವಿಜಯೇಂದ್ರ ಮಾತನಾಡಿ, ಸಾಗರ್ ಪುರಾಣಿಕ್ ಹಾಗೂ ಪವನ್ ಒಡೆಯರ್ ನೇತೃತ್ವದಲ್ಲಿ ಮೂಡಿ ಬಂದಿರುವ ಡೊಳ್ಳು ಸಿನಿಮಾ ಅದ್ಭುತ ಚಿತ್ರ. ಸಿನಿಮಾ ನೋಡುತ್ತಾ ಸಮಯ ಕಳೆದು ಹೋಗಿದ್ದು ಗೊತ್ತಾಗಲಿಲ್ಲ. ಈ ಚಿತ್ರಕ್ಕೆ 17 ಅಂತರಾಷ್ಟ್ರೀಯ ಪ್ರಶಸ್ತಿಗಳು ಬಂದಿರುವುದು. ಭಾರತದಲ್ಲಿ ಎರಡು ಪ್ರಶಸ್ತಿ ಸಿಕ್ಕಿರೋದು ನಮ್ಮ ಕನ್ನಡದ ಹೆಮ್ಮೆ. ಗ್ರಾಮೀಣ ಭಾಗದಿಂದ ಪಟ್ಟಣಕ್ಕೆ ವಲಸೆ ಹೋಗುವ ಸಂದರ್ಭದಲ್ಲಿ ಗ್ರಾಮೀಣ ಸೊಗಡನ್ನು ಮರೆಯುತ್ತಿದ್ದೇವೆ. ನಮ್ಮ ಕಲೆ ಸಂಸ್ಕೃತಿಯನ್ನು ಮರೆಯುತ್ತಿದ್ದೇವೆ. ಈ ಚಿತ್ರದ ಮೂಲಕ ಅದರ ಮಹತ್ವವನ್ನು ಅದ್ಭುತವಾಗಿ ಕಟ್ಟಿಕೊಡಲಾಗಿದೆ. ನಮ್ಮ ಸಂಸ್ಕೃತಿ, ಕಲೆ ಬಗ್ಗೆ ಮೆಲುಕು ಹಾಕುವಂತೆ ಈ ಸಿನಿಮಾ ಮಾಡುತ್ತದೆ. ಈ ಚಿತ್ರ ಯಶಸ್ವಿಯಾಗಲಿ. ಜೊತೆ ಜೊತೆಗೆ ಯುವ ಪೀಳಿಗೆಗೆ ಉತ್ತಮ ಸಂದೇಶ ದೊರೆಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ಚಿತ್ರವನ್ನು ನಿರ್ದೆಶನ ಮಾಡಿದ್ದು, ಕಾರ್ತಿಕ್ ಮಹೇಶ್ ಮತ್ತು ನಿಧಿ ಹೆಗಡೆ ಜೊತೆಗೆ ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ಯ ಸುರೇಶ್ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಪವನದ ಒಡೆಯರ್ ಮೂವೀಸ್ ಬ್ಯಾನರ್ ನಡಿ ಪವನ್ ಒಡೆಯರ್ ಚಿತ್ರ ನಿರ್ಮಾಣ ಮಾಡಿದ್ದು, ಇದೇ 26ರಿಂದ ಚಿತ್ರ ತೆರೆಗೆ ಬರ್ತಿದೆ.
