• January 1, 2026

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಹಿರಿಯ ನಟಿ ಲೀಲಾವತಿ

ಕನ್ನಡದ ಹಿರಿಯ ನಟಿ ಲೀಲಾವತಿ ಹಾಗೂ ಪುತ್ರ ವಿನೋದ್ ರಾಜ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಜೊತೆಗೆ ಕಾರ್ಯಕ್ರಮವೊಂದಕ್ಕೆ ಆಹ್ವಾನ ನೀಡಿದ್ದಾರೆ. ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್ ನೆಲೆಸಿರುವ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಮಾಡಿದ್ದು, ಅದರ ಉದ್ಘಾಟನೆಗೆ ಬೊಮ್ಮಾಯಿ ಅವರನ್ನು ಆಹ್ವಾನಿಸಿದ್ದಾರೆ. ಈ ಹಿಂದೆ ಸಣ್ಣದೊಂದು ಆಸ್ಪತ್ರೆ ಕಟ್ಟಿಸಿದ್ದ ಲೀಲಾವತಿ ಹಾಗೂ ವಿನೋದ್ ರಾಜ್ ಇದೀಗ ಪ್ರಾಥಮಿಕ ಚಿಕಿತ್ಸಾ ಕೇಂದ್ರವನ್ನು ಕಟ್ಟಿದ್ದಾರೆ. ಚೆನೈ ನಲ್ಲಿ ಇದ್ದ ಜಮೀನು ಮಾರಿ ಅದರಿಂದ ಬಂದ ಹಣದಲ್ಲಿ ಈ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಿದ್ದಾರೆ. ಉದ್ಘಾಟನೆಯ ನಂತರ ಈ ಕೇಂದ್ರವನ್ನು ಸರಕಾರಕ್ಕೆ ಬಿಟ್ಟು ಕೊಡಲು ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್ ಕುಮಾರ್ ನಿರ್ಧರಿಸಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now