ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಿಚ್ಚ ಸುದೀಪ್ ಅವರ ವಿಶೇಷ ಅಂಚೆ ಲಕೋಟೆ ಬಿಡುಗಡೆಗೆ ಸಿದ್ಧತೆ
ಭಾರತ ಸರ್ಕಾರದ ಅಂಚೆ ಇಲಾಖೆಯು ದೇಶದ ಮಹತ್ತರ ಘಟನೆಗಳನ್ನು, ಪ್ರಶಸ್ತಿಗಳನ್ನು ಅಥವಾ ವ್ಯಕ್ತಿಗಳ ಸಾಧನೆಗಳನ್ನು ನೂರಾರು ವರ್ಷ ದಾಖಲೆಯಾಗಿ ಉಳಿಸಬೇಕೆಂಬ ಕಾರಣಕ್ಕೆ “ವಿಶೇಷ ಅಂಚೆ ಲಕೋಟೆಯನ್ನು ” ಬಿಡುಗಡೆ ಮಾಡುತ್ತದೆ. ಇದೀಗ ಸುದೀಪ್ ಅವರ ವಿಶೇಷ ಅಂಚೆ ಲಕೋಟೆ ಬಿಡುಗಡೆ ಆಗುತ್ತಿರುವ ಕಾರಣಕ್ಕೆ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ.
ಸುದೀಪ್ ಅವರ ಸಿನಿಮಾ ಜರ್ನಿಗೆ 25 ವರ್ಷ ಕಳೆದಿರುವ ಹಿನ್ನೆಲೆಯಲ್ಲಿ ಸುದೀಪ್ ಸಾಧನೆಯನ್ನು ಭಾರತೀಯ ಅಂಚೆ ಇಲಾಖೆ ದಾಖಲೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅಂಚೆ ಇಲಾಖೆಯ ಅಧೀಕ್ಷರಾದ ಶ್ರೀ ಮಾದೇಶ್ ಅವರು ಕಿಚ್ಚ ಸುದೀಪ್ ಅವರ ಮನೆಗೆ ಭೇಟಿ ನೀಡಿ NOC ಪಡೆದಿದ್ದಾರೆ. ಜೊತೆಗೆ ಬಿಡುಗಡೆ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಿದರು. ಈ ವಿಶೇಷ ಅಂಚೆ ಲಕೋಟೆಯ ಬಿಡುಗಡೆ ಸಮಾರಂಭವು ಶೀಘ್ರದಲ್ಲೇ ನಡೆಯಲಿದೆ.
