• March 14, 2026

ಶ್ರೀವಿಷ್ಣು ಅವತಾರದಲ್ಲಿ ಪುನೀತ್ ರಾಜ್ ಕುಮಾರ್ ನೋಡಿ ಭಾವುಕರಾದ ಫ್ಯಾನ್ಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ 10 ತಿಂಗಳು ಕಳೆದಿದೆ. ಇಂದಿಗೂ ಅಪ್ಪು ಅವರನ್ನು ನೆನಪು ಮಾಡಿಕೊಂಡರೆ ಅಭಿಮಾನಿಗಳು ಭಾವುಕರಾಗುತ್ತಾರೆ. ಸದ್ಯ ಪುನೀತ್ ನಟನೆಯ ಲಕ್ಕಿ ಮ್ಯಾನ್ ಸಿನಿಮಾ ಮುಂದಿನ ವಾರ ತೆರೆಗೆ ಬರಲಿದೆ. ಅದಕ್ಕೂ ಮೊದಲು ಚಿತ್ರದ ಟ್ರೈಲರ್ ನಲ್ಲಿ ಅಪ್ಪು ಅವರನ್ನು ನೋಡಿ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ. ಇತ್ತೀಚೆಗಷ್ಟೇ ಲಕ್ಕಿಮ್ಯಾನ್ ಸಿನಿಮಾದ ಸುದ್ದಿಗೋಷ್ಠಿ ಸಾಕಷ್ಟು ಅದ್ದೂರಿಯಾಗಿ ನೆರವೇರಿತ್ತು. ಈ ವೇಳೆ ಸುದೀಪ್ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ್ದರು. ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಿತ್ರತಂಡ ಲಕ್ಕಿ ಮ್ಯಾನ್ ಟ್ರೈಲರ್ ಅನ್ನು ಯುಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಿದೆ. ನಾಗೇಂದ್ರ ಪ್ರಸಾದ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ಹಾಗೂ ಸಂಗೀತ ಶೃಂಗೇರಿ ನಟಿಸಿರುವ ಲಕ್ಕಿಮ್ಯಾನ್ ಸಿನಿಮಾದಲ್ಲಿ ಪುನೀತ್ ಶ್ರೀಕೃಷ್ಣನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್ ನಲ್ಲಿ ಅಪ್ಪು ಅವರನ್ನು ನೋಡಿದ ಅಭಿಮಾನಿಗಳು ಭಾವುಕರಾಗಿದ್ದಾರೆ. ರಿಯಲ್ ಲೈಫ್ ನಲ್ಲಿ ಲಕ್ಷಾಂತರ ಅಭಿಮಾನಿಗಳ ಪಾಲಿನ ದೇವರಾಗಿದ್ದ ಪುನೀತ್ ರಾಜ್ ಕುಮಾರ್ ಸಿನಿಮಾದಲ್ಲೂ ದೇವರಾಗಿ ಬಣ್ಣ ಹಚ್ಚಿದ್ದಾರೆ. ಪುನೀತ್ ನಟನೆಯ ಕೊನೆಯ ಕಮರ್ಷಿಯಲ್ ಸಿನಿಮಾವಾಗಿರೋ ಲಕ್ಕಿಮ್ಯಾನ್ ರಾಜ್ಯಾದ್ಯಂತ ಸುಮಾರು 300ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಬಿಡುಗಡೆ ಆಗಲಿದೆ. ತಮಿಳಿನ ಓ ಮೈ ಕಡವುದೇ ಸಿನಿಮಾದ ರಿಮೇಕ್ ಆಗಿರೋ ಲಕ್ಕಿಮ್ಯಾನ್ ಪುನೀತ್ ನಟನೆಯ ಕೊನೆಯ ಸಿನಿಮಾ ಅನ್ನೋ ಕಾರಣಕ್ಕೆ ಸಾಕಷ್ಟು ಕುತೂಹಲ ಮೂಡಿಸಿದೆ. ತಮಿಳಿನಲ್ಲಿ ವಿಜಯ್ ಸೇತುಪತಿ ಮಾಡಿದ್ದ ಪಾತ್ರವನ್ನು ಕನ್ನಡದಲ್ಲಿ ಪುನೀತ್ ರಾಜ್ ಕುಮಾರ್ ಮಾಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now