ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಾಶಿಯಾತ್ರೆಗೆ ಹೊರಟು ನಿಂತ ನಟ ಪ್ರಮೋದ್ ಶೆಟ್ಟಿ
ಟೀಸರ್ ನಲ್ಲಿ ಯಾಶಿಯಾತ್ರೆಗೆ ಹೊರಟು ನಿಂತಿರುವ ಮದುಮಗನ ವೇಷದಲ್ಲಿ ಪ್ರಮೋದ್ ಕಾಣಿಸಿಕೊಂಡಿದ್ದು ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಈ ಮೊದಲು ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವ ಇರುವ ವಿನಯ್ ಶಾಸ್ತ್ರಿ ಇದೇ ಮೊದಲ ಬಾರಿಗೆ ಹಿರಿತೆರೆಯ ಸಿನಿಮಾಗೆ ಆಕ್ಷನ್ ಕಟ್ ಹೇಳ್ತಿದ್ದಾರೆ.
gunnybag studios ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ವಿಶ್ವಿ ಸಂಗೀತ ನಿರ್ದೇಶನ ಹಾಗೂ ಸುನೀತ್ ಹಲಗೇರಿ ಅವರ ಛಾಯಾಗ್ರಹಣವಿದೆ. ಸೆಪ್ಟೆಂಬರ್ 12ರಿಂದ ಬೆಂಗಳೂರು ಹಾಗೂ ಮೈಸೂರಿನಲ್ಲಿ “ಕಾಶಿಯಾತ್ರೆ” ಚಿತ್ರದ ಚಿತ್ರೀಕರಣ ಆರಂಭವಾಗಲಿದ್ದು, ಪ್ರಮೋದ್ ಶೆಟ್ಟಿ, ಟಿ.ಎಸ್.ನಾಗಾಭರಣ, ಚಿತ್ತರಂಜನ್ ಕಶ್ಯಪ್, ಸ್ವರ ಶೆಟ್ಟಿ ಮುಂತಾದವರು ಈ ಚಿತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ.
