ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಮ್ಯಾ ಬ್ಯಾನರ್ ನಲ್ಲಿ ಮೊದಲ ಸಿನಿಮಾದ ಅವಕಾಶ ಪಡೆದುಕೊಂಡ ಸ್ಯಾಂಡಲ್ ವುಡ್ ಸ್ಟಾರ್ ಡೈರೆಕ್ಟರ್
ಮೂಲಗಳ ಪ್ರಕಾರ ರಮ್ಯಾ ಬ್ಯಾನರ್ ನ ಆ್ಯಪಲ್ ಹೌಸ್ ನಲ್ಲಿ ನಿರ್ದೇಶಕ ರಾಜ್ ಬಿ ಶೆಟ್ಟಿ ಸಿನಿಮಾ ಮಾಡುತ್ತಾರೆ ಎನ್ನಲಾಗುತ್ತಿದೆ. ಈ ಹಿಂದೆ ರಮ್ಯಾಗೆ ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡುತ್ತಾರೆ ಎನ್ನಲಾಗಿತ್ತು. ಆದರೆ ಆ್ಯಪಲ್ ಹೌಸ್ನ ಮೊದಲ ಸಿನಿಮಾಗೆ ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡುತ್ತಿದ್ದಾರೆ.
ಈಗಾಗಲೇ ರಮ್ಯಾ ಮತ್ತು ರಾಜ್ ಬಿ ಶೆಟ್ಟಿ ಎರಡು ಹಂತದಲ್ಲಿ ಮಾತುಕತೆ ಕೂಡ ಮಾಡಿದ್ದಾರೆ. ಸ್ವತಃ ರಮ್ಯಾ ಮನೆಗೆ ಹೋಗಿ ಶೆಟ್ಟಿ ಅವರು ಕಥೆ ಕೂಡ ಹೇಳಿ ಬಂದಿದ್ದಾರೆ. ಮುಂದಿನ ಹಂತದ ಕೆಲಸಗಳಲ್ಲೂ ಅವರು ತೊಡಗಿದ್ದಾರೆ. ರಮ್ಯಾ ಅವರೇ ಈ ವಿಷಯವನ್ನು ಬಹಿರಂಗ ಪಡಿಸಲಿ ಎಂದು ಕಾಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ರಮ್ಯಾ ಅವರ ಮೊದಲ ನಿರ್ಮಾಣದ ಸಿನಿಮಾ ರಾಜ್ ಬಿ ಶೆಟ್ಟಿ ಅವರದ್ದೇ ಆಗಿರಲಿದೆ ಎನ್ನಲಾಗುತ್ತಿದೆ.
