• June 2, 2026

ಏಷ್ಯಾ ಕಪ್ ಟೂರ್ನಿಯಿಂದ ಹೊರನಡೆದ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಗೆ ಚಾನ್ಸ್

ಮುಂಬೈ: ಗಾಯದ ಸಮಸ್ಯೆಯಿಂದ ಏಷ್ಯಾಕಪ್‍ನಿಂದ ಹೊರಗುಳಿದಿರುವ ಟೀಂ ಇಂಡಿಯಾ ಆಲ್‍ರೌಂಡರ್ ರವೀಂದ್ರ ಜಡೇಜಾ ಪ್ರಸ್ತುತ ಯುಎಇ ಅತಿಥ್ಯದಲ್ಲಿ ನಡೆಯುತ್ತಿರುವ 2022ರ ಟಿ20 ವಿಶ್ವಕಪ್‍ನಿಂದಲೂ ಹೊರಗುಳಿದಿದ್ದಾರೆ. ರವೀಂದ್ರ ಜಡೇಜಾ ಬದಲಿಗೆ ಅಕ್ಷರ್ ಪಟೇಲ್ ಟೀಮ್ ಇಂಡಿಯಾ ಸೇರ್ಪಡೆಯಾಗಲಿದ್ದಾರೆ. ಮೊಣಕಾಲಿನ ಗಾಯದಿಂದ ಏಷ್ಯಾಕಪ್ ನಿಂದ ಹೊರ ಬಂದಿದ್ದ ರವೀಂದ್ರ ಜಡೇಜಾ ಸದ್ಯ ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಿದೆ. ಶಸ್ತ್ರ ಚಿಕಿತ್ಸೆ ಬಳಿಕ ಕನಿಷ್ಟ ಮೂರು ತಿಂಗಳಾದರೂ ವಿಶ್ರಾಂತಿ ತೆಗೆದುಕೊಳ್ಳಬೇಕಾಗುತ್ತದೆ ಎಂದು ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಜಡೇಜಾ ಟಿ20 ವಿಶ್ವಕಪ್ ನಿಂದ ಹೊರ ಬಂದಿದ್ದಾರೆ. “ರವೀಂದ್ರ ಜಡೇಜಾ ಅವರ ಬಲ ಮೊಣಕಾಲಿನಲ್ಲಿ ಗಾಯವಾಗಿದೆ. ಈ ಹಿನ್ನೆಲೆಯಲ್ಲಿ ಅವರು ಏಷ್ಯಾ ಕಪ್‌ ಟೂರ್ನಿಯ ಇನ್ನುಳಿದ ಭಾಗದಿಂದ ಹೊರ ನಡೆದಿದ್ದಾರೆ. ಪ್ರಸ್ತುತ ಬಿಸಿಸಿಐ ವೈದ್ಯಕೀಯ ತಂಡ ಅವರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದೆ. ಅವರ ಸ್ಥಾನಕ್ಕೆ ಅಕ್ಷರ್ ಪಟೇಲ್‌ ಅವರನ್ನು ಆಯ್ಕೆ ಮಾಡಲಾಗಿದೆ,” ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ರವೀಂದ್ರ ಜಡೇಜಾ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ರವೀಂದ್ರ ತಂಡದಿಂದ ಹೊರಗುಳಿದ ಕಾರಣ ಟೀಂ ಇಂಡಿಯಾಗೆ ಭಾರಿ ಹಿನ್ನೆಡೆಯಾಗಿದೆ. ಈ ಹಿಂದೆ ಅಕ್ಷರ್‌ ಪಟೇಲ್‌ ಅವರನ್ನು ಸ್ಟ್ಯಾಂಡ್‌ ಬೈ ಆಗಿ ಆಯ್ಕೆ ಮಾಡಲಾಗಿತ್ತು. ಇದೀಗ ರವೀಂದ್ರ ಜಡೇಜಾರಿಂದ ತೆರವಾಗಿರುವ ಸ್ಥಾನವನ್ನು ಅಕ್ಷರ್‌ ತುಂಬಲಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now