ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
‘ಸೆಪ್ಟೆಂಬರ್ 13’ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ಖ್ಯಾತ ನಟ ಮಮ್ಮುಟ್ಟಿ
ಸೆಪ್ಟೆಂಬರ್ 13 ಸಿನಿಮಾದ ಪೋಸ್ಟರ್ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಮಮ್ಮುಟ್ಟಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಹೆಸರಾಂತ ನಿರ್ಮಾಪಕ ಡಾ.ರಾಜ ಬಾಲಕೃಷ್ಣನ್ ಸೆಪ್ಟೆಂಬರ್ 13 ಸಿನಿಮಾವದ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.ಜೊತೆಗೆ ಸಂಕಲನ, ಛಾಯಾಗ್ರಾಹಣ ಜವಾಬ್ದಾರಿಯನ್ನು ನಿಬಾಯಿಸಿದ್ದು ಸಿನಿಮಾದಲ್ಲಿ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ರುಬಿ ಫಿಲ್ಮಂಸ್ ಬ್ಯಾನರ್ ಅಡಿಯಲ್ಲಿ ಮಾಜಿ ಶಾಸಕ ಇವಾನ್ ನಿಗ್ಲಿ ನಿರ್ಮಾಣ ಮಾಡಿರುವ ಸೆಪ್ಟೆಂಬರ್ 13 ಸಿನಿಮಾದಲ್ಲಿ ಹಿರಿಯ ಕಲಾವಿದರಾದ ವಿನಯ ಪ್ರಸಾದ್, ಜೈ ಜಗದೀಶ್, ಯಮುನಾ ಶ್ರೀನಿಧಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ಶ್ರೀಯಾರಿಧಿಬನ್ ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟಿದ್ದಾರೆ. ಈಗಾಗ್ಲೆ ಶೂಟಿಂಗ್ ಕಂಪ್ಲೀಟ್ ಮಾಡಿರುವ ಸೆಪ್ಟೆಂಬರ್ 13 ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಕೊಂಡಿದ್ದು ಸದ್ಯದಲ್ಲೇ ತೆರೆಗೆ ಬರಲು ಸಿದ್ದವಾಗಿದೆ.
