ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸ್ವಯಂ ವಿಮರ್ಶಕ ಕಮಲ್ ಆರ್ ಖಾನ್ ಗೆ ಜಾಮೀನು: ಆದರೂ ಇಲ್ಲ ಬಿಡುಗಡೆ ಭಾಗ್ಯ
ಅಕ್ಷಯ್ ಕುಮಾರ್ ಹಾಗೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಬಗ್ಗೆ ವಿವಾದಾತ್ಮಕ ಟ್ವೀಟ್ ಅನ್ನು ಕಮಾಲ್ ಆರ್. ಖಾನ್ ಮಾಡಿದ್ದರು. ಈ ಕೇಸ್ನಲ್ಲಿ ಅವರು ನ್ಯಾಯಾಂಗ ಬಂಧನಕ್ಕೆ ಒಳಗಾದರು. ಇದಾದ ಬೆನ್ನಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಕೂಡ ಬೆಳಕಿಗೆ ಬಂದಿದ್ದು ಈ ಸಂಬಂಧ ಕೇಸ್ ದಾಖಲಾಗಿದೆ.
ಎರಡೂ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕಮಾಲ್ ಆರ್. ಖಾನ್ ಬೋರಿವಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಕೋರಿದ್ದರು. ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮಾತ್ರ ಕಮಾಲ್ಗೆ ಜಾಮೀನು ಸಿಕ್ಕಿದೆ. ವಿವಾದಾತ್ಮಕ ಟ್ವೀಟ್ ಪ್ರಕರಣ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಹೀಗಾಗಿ, ಅವರು ಜೈಲಿನಲ್ಲಿ ಇರುವುದು ಅನಿವಾರ್ಯ ಆಗಿದೆ. ಕಮಾಲ್ ಖಾನ್ ಆಗಸ್ಟ್ 30ರಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೆ ಒಳಗಾದರು.
ಒಟ್ನಲ್ಲಿ ಕಮಲ್ ಖಾನ್ ರ ಒಂದೊಂದೆ ಅಪರಾಧಗಳು ಆಚೆ ಬರುತ್ತಿದೆ. ಮುಂದಿನ ದಿನಗಳಲ್ಲಿ ಕೆಆರ್ ಕೆ ವಿರುದ್ಧ ಮತ್ತಷ್ಟು ದೂರುಗಳು ದಾಖಲಾಗುವ ಸಾಧ್ಯತೆ ಇದೆ.
