• February 10, 2026

ಹನಿಮೂನ್ ಎಂಜಾಯ್ ಮಾಡುತ್ತಿರುವ ನಟಿ ಮಹಾಲಕ್ಷ್ಮೀ, ನಿರ್ಮಾಪಕ ರವೀಂದರ್

ಕಳೆದ ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ತಮಿಳು ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಾರೆ.ಮಿಸ್ ಮ್ಯಾಚ್ ಜೋಡಿ ಎಂದು ಟ್ರೋಲ್ ಗೆ ಒಳಗಾದ ನವ ದಂಪತಿಗಳು ಇದೀಗ ಏನೇ ಮಾಡಿದ್ರು ಸುದ್ದಿಯಾಗ್ತಿದ್ದಾರೆ. ತಿರುಪತಿಯಲ್ಲಿ ಸತಿ ಪತಿಗಳಾದ ಜೋಡಿ ಮಹಾಲಕ್ಷ್ಮೀ ಹಾಗೂ ರವೀಂದರ್ ಚಂದ್ರಶೇಖರನ್  ಮದುವೆಯಾದ ಮೂರೇ ದಿನಕ್ಕೆ ಇಸ್ರೇಲ್ ಹಾಗೂ ಬ್ರೆಸಿಲ್ ಗೆ ಹನಿಮೂನ್ ಟೂರ್ ಹೊರಟಿದ್ದಾರೆ. ಹನಿಮೂನ್ ಸ್ಥಳದಿಂದ ಈ ಜೋಡಿಗಳು ಫೋಟೋಗಳನ್ನು ಶೇರ್ ಮಾಡಿದ್ದು ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಮದುವೆಯ ಫೋಟೋ ಹಂಚಿಕೊಂಡ ಕ್ಷಣದಿಂದಲೂ ಮಹಾಲಕ್ಷ್ಮಿ ಹಾಗೂ ರವೀಂದರ್ ಕುರಿತಾಗಿ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಹಣದಾಸೆಗಾಗಿ ಮಹಾಲಕ್ಷ್ಮೀ, ರವೀಂದರ್ ಅವರನ್ನು ಮದುವೆಯಾದರು ಎನ್ನುವ ಮಾತುಗಳು ಕೇಳಿ ಬಂದಿತ್ತು. ಆದರೆ ಅದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಜೋಡಿಗಳು ಹನಿಮೂನ್ ಎಂಜಾಯ್ ಮಾಡುತ್ತಿದ್ದಾರೆ.   ಮಹಾಲಕ್ಷ್ಮಿ ಮತ್ತು ರವೀಂದರ್ ಮದುವೆಯಾಗುತ್ತಿದ್ದಂತೆ ಮಹಾಲಕ್ಷ್ಮೀ ಕುರಿತಾಗಿ ಸಾಕಷ್ಟು ಸುದ್ದಿಗಳು ಹರಿದಾಡಲು ಶುರುವಾಗಿದೆ. ಮಹಾಲಕ್ಷ್ಮೀಗೆ ಈ ಮೊದಲೇ ಮದುವೆಯಾಗಿದ್ದು ಎರಡು ಮಕ್ಕಳಿದ್ದಾರಂತೆ.ಮೊದಲ ಪತಿಯಿಂದ ವಿಚ್ಚೇದನ ಪಡೆದ ಬಳಿಕ ತಮ್ಮೊಂದಿಗೆ ನಟಿಸುತ್ತಿದ್ದ ಸಹ ನಟ ಈಶ್ವರ್ ಎನ್ನುವವರ ಜತೆ ಅಫೇರ್ ಇಟ್ಟುಕೊಂಡಿದ್ದರು ಎಂದು ಸ್ವತಃ ಈಶ್ವರ್ ಅವರ ಪತ್ನಿಯೇ ಆರೋಪ ಮಾಡಿದ್ದಾರೆ. ನನ್ನ ಗಂಡನ ಜೊತೆ ಮಹಾಲಕ್ಷ್ಮಿ ದಿನವೂ ರಾತ್ರಿ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದಳು. ಅದಕ್ಕೆ ಬೇಕಾದ ಸಾಕ್ಷಿ ನನ್ನ ಬಳಿ ಇದೆ ಎಂದು ಈಶ್ವರ್ ಪತ್ನಿ ಜಯಶ್ರೀ ಆರೋಪ ಮಾಡಿದ್ದರು. ಇದೆಲ್ಲಾ ಗೊತ್ತಿದ್ದು ರವೀಂದರ್ ಮಹಾಲಕ್ಷ್ಮೀಯನ್ನು ಮದುವೆಯಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಜೋಡಿ ಸದ್ಯ ಹನಿಮೂನ್ ಎಂಜಾಯ್ ಮಾಡುತ್ತಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now