• March 14, 2026

ರಾಜಕೀಯಕ್ಕೆ ಎಂಟ್ರಿಕೊಟ್ಟ ಸ್ಯಾಂಡಲ್ ವುಡ್ ನಟಿ ಆರೋಹಿತ

ಸ್ಯಾಂಡಲ್‌ವುಡ್ ನಟಿ ಆರೋಹಿತ ಆಮ್ ಆದ್ಮಿ ಪಕ್ಷದ ಮೂಲಕ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಎಎಪಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಆರೋಹಿತ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದು ಇದೇ ವೇಳೆ ವಸಂತನಗರ ಕ್ಷೇತ್ರದಿಂದ ಚುನಾವಣೆಗೆ ನಿಲ್ಲುವ ಬಯಕೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಸಂತನಗರದ ನಿವಾಸಿಯಾಗಿರುವ ಆರೋಹಿತ ಅಲಿಯಾಸ್ ಪ್ರಿಯಾಂಕ ಬಿ.ಕಾಂ ಪದವೀಧರೆಯಾಗಿದ್ದು ವಿದ್ಯಾಭ್ಯಾಸದ ಬಳಿಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಕಿರಿಕ್ ಪಾರ್ಟಿ,ಗೌಡ್ರು ಹೋಟೆಲ್,ಜಗ್ಗಿ, ಅಧ್ಯಕ್ಷ ಸೇರಿದಂತೆ ಇನ್ನೂ ಕೆಲ ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಆರೋಹಿತ ಇದೀಗ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಈ ವೇಳೆ ಮಾತನಾಡಿದ ಆರೋಹಿತ ಕರ್ನಾಟಕ ಹಾಗೂ ದೇಶದೆಲ್ಲೆಡೆ ಬದಲಾವಣೆ ಸಾಧ್ಯವಾಗಬೇಕಾದರೆ ಶಾಲೆಗಳಲ್ಲಿ ಎಲ್ಲಾ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕು. ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿಯು ಸರ್ಕಾರಿ ಶಾಲೆಗಳಲ್ಲಿ ಅದ್ಭುತ ಬದಲಾವಣೆ ತಂದಿದೆ. ಸ್ವಚ್ಛ ಹಾಗೂ ಗುಣಮಟ್ಟದ ಆಡಳಿತದಿಂದ ಮಾತ್ರ ಇದು ಸಾಧ್ಯ. ಕರ್ನಾಟಕದಲ್ಲೂ ಅಂತಹ ಆಡಳಿತ ಬರಬೇಕು ಎಂಬ ಉದ್ದೇಶದಿಂದ ಎಎಪಿ ಪಕ್ಷಕ್ಕೆ ನಾನು ಸೇರಿದ್ದೇನೆ ಎಂದರು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now