• March 14, 2026

ಒಂದು ದಿನ ಬಿಡುವು ಮಾಡಿಕೊಂಡು ಜನ್ಮ ದಿನ ಆನಂದಿಸಿ: ಮೋದಿಗೆ ಶಾರುಖ್ ಖಾನ್ ಸಲಹೆ

ಇಂದು ಪ್ರಧಾನಿ ನರೇಂದ್ರ ಮೋದಿಯವರ 72 ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಸಾಕಷ್ಟು ಕಡೆಗಳಲ್ಲಿ ಸಮಾಜಮುಖಿ ಕೆಲಸಗಳನ್ನು ನಡೆಸಲಾಗಿದೆ. ಮೋದಿ ಹುಟ್ಟುಹಬ್ಬಕ್ಕೆ ರಾಜಕೀಯ ರಂಗದವರು, ಗಣ್ಯರು, ಸಿನಿಮಾ ರಂಗದವರು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಕೂಡ ಮೋದಿ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದು ಜನ್ಮದಿನದಂದು ರಜೆ ತೆಗೆದುಕೊಂಡು ಆನಂದಿಸಿ ಎಂದಿದ್ದಾರೆ. ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಮೋದಿ ಹುಟ್ಟುಹಬ್ಬಕ್ಕೆ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ನಮ್ಮ ದೇಶ ಮತ್ತು ಅದರ ಜನರ ಕಲ್ಯಾಣಕ್ಕಾಗಿ ನಿಮ್ಮ ಸಮರ್ಪಣೆಯನ್ನು ಹೆಚ್ಚು ಪ್ರಶಂಸಿಸಲಾಗುತ್ತದೆ. ನಿಮ್ಮ ಎಲ್ಲಾ ಗುರಿಗಳನ್ನು ಸಾಧಿಸುವ ಶಕ್ತಿ ಮತ್ತು ಆರೋಗ್ಯವನ್ನು ನೀವು ಹೊಂದಿರಲಿ. ಒಂದು ದಿನ ಬಿಡುವು ಮಾಡಿಕೊಂಡು ನಿಮ್ಮ ಜನ್ಮದಿನವನ್ನು ಆನಂದಿಸಿ ಎಂದು ಟ್ವೀಟ್ ಮೂಲಕ ಶಾರುಖ್ ಖಾನ್ ಮೋದಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಮೋದಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಟಿ ರಮ್ಯಾ ಸ್ಪಂದನ ಕೂಡ ಶುಭ ಹಾರೈಸಿದ್ದು, ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಶಕ್ತಿ, ಸ್ಫೂರ್ತಿ ಸದಾ ನಿಮ್ಮೊಂದಿಗಿರಲಿ ಎಂದು ಟ್ವೀಟ್ ಮಾಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now