ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
“ಬನಾರಸ್” ಸಿನಿಮಾದಲ್ಲಿ ಮೋಡಿ ಮಾಡುತ್ತಿದೆ ಜಾನಪದ ಹಾಡು
“ಬನಾರಸ್” ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿರುವ ಸಮಯದಲ್ಲಿ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದೆ. “ಹೆಣ್ಣು ಹಡೆಯಲು ಬ್ಯಾಡಾ” ಎಂಬ ಪ್ರಸಿದ್ದ ಜಾನಪದ ಗೀತೆಯನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಅಜನೀಶ್ ಲೋಕನಾಥ್ ಅವರ ಸಮಧುರ ಸಂಗೀತದಲ್ಲಿ ಮೂಡಿಬಂದಿರುವ ಈ ಹಾಡನ್ನು ಹರ್ಷಿಕಾ ದೇವನಾಥ್ ಸುಶ್ರಾವ್ಯವಾಗಿ ಹಾಡಿದ್ದಾರೆ.
ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ನಿರ್ಮಾಣವಾಗಿರುವ ಈ ಪ್ಯಾನ್ ಇಂಡಿಯಾ ಸಿನಿಮಾವನ್ನು ತಿಲಕ್ ರಾಜ್ ಬಲ್ಲಾಳ್ ನಿರ್ಮಿಸಿದ್ದಾರೆ.
