• December 22, 2025

ಅಮೀರ್ ಖಾನ್ ತಾಯಿ ಜೀನತ್ ಹುಸೇನ್ ಗೆ ಹೃದಯಾಘಾತಕ್ಕೆ

ಬಾಲಿವುಡ್ ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್ ತಾಯಿ ಜೀನತ್ ಹುಸೇನ್ ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿದ್ದು ಸದ್ಯ ಚೇತರಿಸಿಕೊಂಡಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಜೀನತ್ ಆರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡು ಬಂದಿದ್ದು ಇದೀಗ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ದೀಪಾವಳಿ ಹಬ್ಬದ ಸಂದರ್ಭ ದಲ್ಲಿ ಜೀನತ್ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸೇರಿಸಲಾಗಿತ್ತು. ವೈದ್ಯರ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿರುವ ಜೀನತ್ ಹುಸೇನ್ ಸದ್ಯ ಮನೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಅಮೀರ್ ಖಾನ್ ಗೆ ಒಂದರ ಹಿಂದೊದಂರಂತೆ ಆಘಾತಗಳು ಎದುರಾಗುತ್ತಿದೆ. ಇತ್ತೀಚೆಗಷ್ಟೇ ಅಮೀರ್ ಖಾನ್ ನಟನೆಯ ಬಹು ನಿರೀಕ್ಷಿತ ಲಾಲ್ ಸಿಂಗ್ ಚಡ್ಡಾ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಸೋಲು ಕಂಡಿತ್ತು. ಬಾಯ್ ಕಾಟ್ ಬಿಸಿಗೆ ಬಲಿಯಾದ ಲಾಲ್ ಸಿಂಗ್ ಚಡ್ಡಾ ಚಿತ್ರಕ್ಕೆ ಹಾಕಿದ ಬಂಡವಾಳವೂ ವಾಪಸ್ ಬರದಂತಾಗಿತ್ತು. ಚಿತ್ರಕ್ಕೆ ಅಮೀರ್ ಖಾನ್ ಕೂಡ ಒಬ್ಬ ನಿರ್ಮಾಪಕರಾಗಿದ್ದರು. ಇದೀಗ ತಾಯಿಯ ಅನಾರೋಗ್ಯ ಅಮೀರ್ ಗೆ ಮತ್ತಷ್ಟು ಅಘಾತವಾಗಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now