• December 22, 2025

ಮುಂಬೈನ ಬೀದಿಗಳಲ್ಲಿ ಯುವಕರ ಜೊತೆ ಕ್ರಿಕೆಟ್ ಆಡಿದ ಎಬಿಡಿ

ಮುಂಬೈ: ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಮುಂಬೈನ ಗಲ್ಲಿಯಲ್ಲಿ ಸ್ಥಳೀಯ ಯುವಕರೊಂದಿಗೆ ಕ್ರಿಕೆಟ್ ಆಡಿರುವ ವೀಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಳೆದ ಕೆಲ ದಿನಗಳಿಂದ ಎಬಿ ಡಿವಿಲಿಯರ್ಸ್ ಸಖತ್ ಸದ್ದು ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆ 2023ರ ಐಪಿಎಲ್ ಮಿನಿ ಹರಾಜಿಗೂ ಮುನ್ನ ಬೆಂಗಳೂರಿಗೆ ಆಗಮಿಸಿದ್ದ ಎಬಿಡಿ ಫ್ರಾಂಚೈಸ್ ಜೊತೆ ಕಾಣಿಸಿಕೊಂಡಿದ್ದರು. ಜೊತೆಗೆ ಕಾಂತಾರ ಚಿತ್ರದ ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ ಜೊತೆ ಕಾಣಿಸಿಕೊಂಡಿದ್ದು ಈ ವೇಳೆ ಇವರಿಬ್ಬರು ಕಾಂತಾರ ಎಂದು ಹೇಳುವ ವಿಡಿಯೋವೊಂದು ಸಖತ್ ಸದ್ದು ಮಾಡಿತ್ತು. ಇದೀಗ ಮುಂಬೈ ಗಲ್ಲಿ ಹುಡುಗರ ಜೊತೆ ಕ್ರಿಕೆಟ್ ಆಡಿ ಸದ್ದು ಮಾಡ್ತಿದ್ದಾರೆ. ಟ್ವಿಟ್ಟರ್ ಬಳಕೆದಾರನೊಬ್ಬ ಎಬಿಡಿ ಅಭಿಮಾನಿಗಳ ಜೊತೆಗೆ ಕ್ರಿಕೆಟ ಆಡುತ್ತಿರುವ 2 ವೀಡಿಯೋವನ್ನು ಹಂಚಿಕೊಂಡಿದ್ದಾನೆ. ಮೊದಲನೇ ವೀಡಿಯೋದಲ್ಲಿ ಮುಂಬೈನ ಮಹಾಲಕ್ಷ್ಮಿ ಗಲ್ಲಿಯೊಂದರಲ್ಲಿ ಅಭಿಮಾನಿಯೊಬ್ಬರು ಎಸೆದ ಬೌಲ್‍ಗೆ ಎಬಿಡಿ ವಿಲಿಯರ್ಸ್ ಬ್ಯಾಟಿಂಗ್ ಮಾಡುತ್ತಿದ್ದಾರೆ. ನಂತರ ಅಭಿಮಾನಿಗಳಿಂದ ಔಟ್ ಆಗುತ್ತಾರೆ. ಹಾಗೆಯೇ ಮತ್ತೊಂದು ವೀಡಿಯೋದಲ್ಲಿ ಕೀಪರ್ ಆಗಿ ಎಬಿಡಿ ಕ್ರಿಕೇಟ್ ಆಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು ಎಬಿಡಿಯ ಸಿಂಪ್ಲಿಸಿಟಿಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now