ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕೊಟ್ಟ ಮಾತಿಗೆ ತಪ್ಪದ ಹ್ಯಾಟ್ರಿಕ್ ಹೀರೋ: ಶಿವರಾಜ್ ಕುಮಾರ್ ಚಿತ್ರದಲ್ಲಿ ಅಭಿಜಿತ್ ನಟನೆ
ಜೋಡಿ ನಂಬರ್ ವನ್ ಶೋನಲ್ಲಿ ನಟ ಅಭಿಜಿತ್ ಪತ್ನಿಯೊಂದಿಗೆ ಭಾಗವಹಿಸಿದ್ದರು. ಈ ವೇಳೆ “ನನ್ನ ಮುಂದಿನ ಸಿನಿಮಾದಲ್ಲಿ ನೀವೂ ಇರುತ್ತೀರಿ” ಎಂದಿದ್ದರು. ಇದೀಗ ಶಿವಣ್ಣ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ತಮ್ಮ ಮುಂದಿನ ಸಿನಿಮಾ ಘೋಸ್ಟ್ ಚಿತ್ರದಲ್ಲಿ ಅಭಿಜಿತ್ ಗೆ ಅವಕಾಶ ಕಲ್ಪಿಸಿ ಕೊಟ್ಟಿದ್ದಾರೆ.
ಇತ್ತೀಚೆಗಷ್ಟೇ ಶಿವರಾಜ್ ಕುಮಾರ್ ನಟನೆಯ ಸಂದೇಶ್ ನಾಗರಾಜ್ ಪ್ರೊಡಕ್ಷನ್ ಹೌಸ್ ನಲ್ಲಿ ನಿರ್ಮಾಣವಾಗುತ್ತಿರುವ, ಶ್ರೀನಿ ನಿರ್ದೇಶನದ ಘೋಸ್ಟ್ ಸಿನಿಮಾ ಸೆಟ್ಟೇರಿದೆ. ಈ ಸಿನಿಮಾದ ವಿಶೇಷ ಪಾತ್ರದಲ್ಲಿ ಅಭಿಜಿತ್ ನಟಿಸುತ್ತಿದ್ದಾರೆ. ಸಾಕಷ್ಟು ಸಮುದಿಂದ ಸಿನಿಮಾ ರಂಗದಿಂದ ದೂರವಿದ್ದ ಅಭಿಜಿತ್ ಇದೀಗ ಒಂದೊಳ್ಳೆ ಪಾತ್ರದ ಮೂಲಕ ಮತ್ತೆ ಗಾಂಧಿನಗರಕ್ಕೆ ಎಂಟ್ರಿಕೊಡ್ತಿದ್ದಾರೆ.
ಘೋಸ್ಟ್ ಮಾತ್ರವಲ್ಲ ಇದರ ಜೊತೆಗೆ ಇನ್ನೂ ಎರಡು ಸಿನಿಮಾದಲ್ಲಿ ನಟಿಸುವ ಅವಕಾಶವನ್ನು ಶಿವಣ್ಣ ಅಭಿಜಿತ್ ಗೆ ಒದಗಿಸಿಕೊಟ್ಟಿದ್ದಾರೆ. ಈ ಮೂಲಕ ಶಿವರಾಜ್ ಕುಮಾರ್ ಕೊಟ್ಟ ಮಾತನ್ನು ಉಳಿಸಿಕೊಟ್ಟಿದ್ದಾರೆ.
