• January 1, 2026

‘ಗಜರಾಮ’ನಿಗೆ ಕ್ಲಾಪ್ ಮಾಡಿ ಶುಭ ಹಾರೈಸಿದ ಅಭಿಷೇಕ್ ಅಂಬರೀಶ್

ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಸದ್ಯ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಬಿಚ್ಚುಗತ್ತಿ ಸಿನಿಮಾದ ಬಳಿಕ ರಾಜವರ್ಧನ್ ಬ್ಯಾಕ್ ಟು ಬ್ಯಾಕ್ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದು ಇದೀಗ ‘ಗಜರಾಮ’ ನಾಗಲು ರಾಜವರ್ಧನ್ ರೆಡಿಯಾಗಿದ್ದಾರೆ. ರಾಜವರ್ಧನ್ ನಟನೆಯ ಪ್ರಣಯಂ ಹಾಗೂ ಹಿರಣ್ಯ ಸಿನಿಮಾಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಅದಕ್ಕೂ ಮುನ್ನ ರಾಜವರ್ಧನ್ ಮತ್ತೊಂದು ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ರಾಜವರ್ಧನ್ ಸದ್ಯ ಗಜರಾಮ ಸಿನಿಮಾದಲ್ಲಿ ತೊಡಗಿಕೊಂಡಿದ್ದು ಈಗಾಗ್ಲೆ ಫಸ್ಟ್ ಲುಕ್ ಫೋಸ್ಟರ್ ಮೂಲಕ ಸಖತ್ ಕಿಕ್ ಕೊಟ್ಟಿದ್ದಾರೆ. ಸದ್ಯ ಗಜರಾಮ ಸಿನಿಮಾದ ಮುಹೂರ್ತ ನೆರವೇರಿದ್ದು ಸ್ನೇಹಿತನ ಸಿನಿಮಾಗೆ ಕ್ಲಾಪ್ ಮಾಡುವ ನಟ ಅಭಿಷೇಕ್ ಅಂಬರೀಶ್ ಸಾಥ್ ನೀಡಿದ್ದಾರೆ. ಸುನೀಲ್ ಕುಮಾರ್ ವಿ ಎ ನಿರ್ದೇಶನದ ಗಜರಾಮ ಸಿನಿಮಾಗೆ ಅಂಬಿಷೇಕ್ ಅಂಬರೀಶ್ ಸಾಥ್ ನೀಡಿದ್ದಾರೆ. ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕನಾಗಿ ಹಲವು ವರ್ಷಗಳ ಕಾಲ ದುಡಿದು ಅನುಭವವಿರುವ ಸುನೀಲ್ ಕುಮಾರ್ ‘ಗಜರಾಮ’ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಚಿತ್ರಕ್ಕೆ ಕ್ಲ್ಯಾಪ್ ಮಾಡಿ ಮಾತನಾಡಿದ ಅಭಿಷೇಕ್  ಅಂಬರೀಶ್ ನಮ್ಮ ತಂದೆ ಗಜೇಂದ್ರ ಎನ್ನುವ ಸಿನಿಮಾ ಮಾಡಿದ್ರು. ಈಗ ನನ್ನ ಸ್ನೇಹಿತ ಗಜರಾಮ ಹೆಸರಿನ ಚಿತ್ರದಲ್ಲಿ ನಟಿಸುತ್ತಿದ್ದಾರೆ. ರಾಜವರ್ಧನ್ ಮೋಷನ್ ಪೋಸ್ಟರ್ ನಲ್ಲಿ ತುಂಬಾ ಚೆನ್ನಾಗಿ ಕಾಣಿಸಿಕೊಂಡಿದ್ದಾರೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದ್ದಾರೆ. ಗಜರಾಮ ಸಿನಿಮಾದ ಬಗ್ಗೆ ಮಾತನಾಡಿದ ರಾಜವರ್ಧನ್, ಒಂದೊಳ್ಳೆ ಫ್ಯಾಮಿಲಿ ಎಂಟಟೈನ್ಮೆಂಟ್ ಹಾಗೂ ಮಾಸ್ ಕಟೆಂಟ್ ಒಳಗೊಂಡ ಕಥೆ ಚಿತ್ರದಲ್ಲಿದೆ. ನನ್ನ ಪಾತ್ರದ ಬಗ್ಗೆ ಕೇಳಿ ಸಖತ್ ಇಷ್ಟವಾಯಿತು. ಒಳ್ಳೆ ಪ್ರೊಡಕ್ಷನ್ ಹೌಸ್, ಒಳ್ಳೆ ನಿರ್ಮಾಪಕರು, ಒಳ್ಳೆ ಚಿತ್ರ ಸಿಕ್ಕಾಗ ಕೈ ಬಿಡಬಾರದು. ನನಗೆ ಸ್ಟೋರಿ ಲೈನ್ ಪರ್ಸನಲಿ ಖುಷಿ ನೀಡಿದೆ ಎಂದರು. ಈಗಾಗ್ಲೆ ರಿಷಬ್ ಶೆಟ್ಟಿ ನಟನೆಯ ಹರಿಕಥೆ ಅಲ್ಲ ಗಿರಿಕಥೆ ಸಿನಿಮಾದಲ್ಲಿ ನಟಿಸಿರುವ ನಟಿ ತಪಸ್ವಿನಿ ಪೂಣಚ್ಚ ಗಜರಾಮ ಸಿನಿಮಾದಲ್ಲಿ ರಾಜವರ್ಧನ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ರಾಜವರ್ಧನ್‌ಗೆ ನಾಯಕಿಯಾಗಿ ಕೊಡಗಿನ ಬೆಡಗಿ ತಪಸ್ವಿನಿ ಪೂಣಚ್ಚ ತೆರೆ ಹಂಚಿಕೊಳ್ಳುತ್ತಿದ್ದಾರೆ. ಹರಿಕಥೆ ಅಲ್ಲ ಗಿರಿಕಥೆ ನಂತರ ಇವರು ನಟಿಸುತ್ತಿರುವ ಎರಡನೇ ಸಿನಿಮಾವಿದು. ಇಂದಿನಿಂದ ಸಿನಿಮಾದ ಶೂಟಿಂಗ್ ಆರಂಭವಾಗಲಿದ್ದು ನಟ ದೀಪಕ್ ಪ್ರಿನ್ಸ್ ಸಿನಿಮಾದ ಪ್ರಮುಖ ಪಾತ್ರವೊಂದಕ್ಕೆ ಬಣ್ಣ ಹಚ್ಚಲಿದ್ದಾರೆ. ಚಿತ್ರಕ್ಕೆ ಮ್ಯೂಸಿಕ್ ಮಾಂತ್ರಿಕ ಮನೋಮೂರ್ತಿ ಸಂಗೀತ ನಿರ್ದೇಶನ ಮಾಡಲಿದ್ದ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now