• January 1, 2026

ಬ್ಲಾಕ್ ಮೇಲೆ ಮಾಡಿ ಸಾರ್ವಜನಿಕರಿಂದ ಗೂಸ ತಿಂದ ಬಿಗ್ ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರ

ತುಮಕೂರು: ಬಿಗ್ ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರ ಪ್ರದೀಪ್ ಮಹಾನಗರ ಪಾಲಿಕೆ ಸಿಬ್ಬಂದಿಗೆ ಬ್ಲಾಕ್ ಮೇಲ್ ಮಾಡಿದ ಕಾರಣಕ್ಕೆ ಆತನಿಗೆ ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ನಡೆದಿದೆ. ವಾರ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿರುವ ಪ್ರದೀಪ್  ಸಬ್ಸಿಡಿ ಸಾಲ ಮಂಜೂರು ಮಾಡಿಕೊಡುವಂತೆ ನಗರ ಜೀವನೋಪಾಯ ಕೇಂದ್ರಕ್ಕೆ ತೆರಳಿದ್ದರು. ಈ ವೇಳೆ ಲಂಚದಾಸೆ ತೋರಿಸಿದ ಪ್ರದೀಪ್ ಅದನ್ನು ವೀಡಿಯೋ ಮಾಡಿಕೊಂಡಿದ್ದ. ಬಳಿಕ ವೀಡಿಯೋ ತೋರಿಸಿ ನಗರ ಜೀವನೋಪಾಯ ಕೇಂದ್ರದಲ್ಲಿ ಸಿಆರ್‌ಸಿ ಆಗಿ ಕೆಲಸ ಮಾಡುತ್ತಿದ್ದ ಯುವತಿಗೆ ನಿರಂತರ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪ ಕೇಳಿ ಬಂದಿದೆ. ಅದೇ ರೀತಿ ನಿನ್ನೆ ಸಂಜೆ ಯುವತಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಬಂದ ಪ್ರದೀಪ್ ಆಕೆಗೆ ಬೆದರಿಕೆ ಹಾಕಿದ್ದಾನೆ. ಈ ವೇಳೆ ಅಲ್ಲಿದ್ದ ಸ್ಥಳಿಯರು ಆತನಿಗೆ ಧರ್ಮದೇಟು ನೀಡಿದ್ದಾರೆ. ಜೊತೆಗೆ ಪ್ರದೀಪ್ ಜೊತೆ ಮಹಾನಗರ ಪಾಲಿಕೆ ಆವರಣಕ್ಕೆ ಬಂದಿದ್ದ ನಕಲಿ ಪತ್ರಕರ್ತರು ಸೇರಿ ಹ್ಯೂಮನ್ ರೈಟ್ಸ್ ಎಂದು ಹೇಳಿಕೊಂಡು ಬಂದವರಿಗೂ ಗೂಸಾ ಬಿದ್ದಿದೆ. ಘಟನೆಗೆ ಸಂಬಂಧಿಸಿದಂತೆ ಬ್ಲಾಕ್ ಮೇಲ್‍ಗೆ ಮುಂದಾಗಿದ್ದ ನಾಲ್ವರನ್ನು ತುಮಕೂರು ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now