ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪುಣ್ಯಕೋಟಿ ರಾಯಭಾರಿಯಾದ ಕಿಚ್ಚ ಸುದೀಪ್: ಅಪ್ಪು ಹಾದಿಯಲ್ಲಿ ನಡೆದ ‘ಮಾಣಿಕ್ಯ’
ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲಾಗಿದೆ. ಹೈನುಗಾರಿಕೆಗೆ ಉತ್ತೇಜನ, ಜಾನುವಾರುಗಳ ಸಂರಕ್ಷಣೆ, ಪಾಲನೆ, ಪೋಷಣೆ ಮಾಡುತ್ತಿರುವ ಸರ್ಕಾರದೊಂದಿಗೆ ಕೈ ಜೋಡಿಸಿ, ಸಾರ್ವಜನಿಕರಲ್ಲಿ ಸ್ಫೂರ್ತಿ ತುಂಬಲು ತಮ್ಮನ್ನು ಪುಣ್ಯಕೋಟಿ ರಾಯಭಾರಿಯಾಗಿ ನೇಮಿಸಲಾಗಿದೆ. ತಮ್ಮ ಜನ್ಮದಿನದ ಈ ಶುಭ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಪ್ರಭು ಚವ್ಹಾಣ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸುದೀಪ್ ಅವರನ್ನು ಪಶು ಸಂಗೋಪನೆ ಇಲಾಖೆಯ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಲಾಗಿದ್ದು, ಯಾವುದೇ ಸಂಭಾವನೆ ಇಲ್ಲದೆ ಈ ಕೆಲಸವನ್ನು ನಿರ್ವಹಿಸಲು ಸುದೀಪ್ ಮುಂದಾಗಿದ್ದಾರೆ ಎಂದು ಪ್ರಭು ಚವ್ಹಾಣ್ ಹೇಳಿದ್ದಾರೆ.
ನಟ ಪುನೀತ್ ರಾಜ್ ಕುಮಾರ್ ಸಾಮಾಜಿಕ ಕಳಕಳಿಯ ಸರ್ಕಾರಿ ಜಾಹಿರಾತುಗಳಲ್ಲಿ ನಟಿಸಲು ಯಾವುದೇ ಸಂಭಾವನೆಯನ್ನು ಪಡೆಯುತ್ತಿರಲಿಲ್ಲ. ಇದೀಗ ಪುನೀತ್ ಹಾದಿಯಲ್ಲೇ ಸುದೀಪ್ ನಡೆಯುತ್ತಿದ್ದು ಯಾವುದೇ ಸಂಭಾವನೆ ಪಡೆಯದೆ ಪುಣ್ಯಕೋಟಿಯ ರಾಯಭಾರಿಯಾಗಿದ್ದಾರೆ.
