ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಸೂಪರ್ ಡ್ಯೂಪರ್ ಸಿನಿಮಾ ಓಂ ಚಿತ್ರದ ಮೂಲಕ ಸಾಕಷ್ಟು ಪ್ರತಿಭೆಗಳು ಬೆಳಕಿಗೆ ಬಂದಿದ್ದಾರೆ. ಓಂ ಸಿನಿಮಾದಲ್ಲಿ ಡಾನ್ ರೈ ಪಾತ್ರದಲ್ಲಿ ಕಾಣಿಸಿಕೊಂಡು ಖ್ಯಾತಿ ಘಳಿಸಿದ ನಟ ಹರೀಶ್ ರೈ ಇದೀಗ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ.

ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಹರೀಶ್ ರೈ ಅವರಿಗೆ ಇತ್ತೀಚೆಗೆ ಸಿನಿಮಾದ ಅವಕಾಶಗಳು ಕಡಿಮೆಯಾಗಿತ್ತು. ಸಾಕಷ್ಟು ವರ್ಷಗಳಿಂದ ಸಿನಿಮಾ ರಂಗದಿಂದ ದೂರವಿದ್ದ ಹರೀಶ್ ರೈ ಇತ್ತೀಚೆಗೆ ತೆರೆಕಂಡ ಕೆಜಿಎಫ್ ಸಿನಿಮಾದಲ್ಲಿ ಕಾಣಿಸಿಕೊಂಡು ಮತ್ತೆ ಸದ್ದು ಮಾಡಿದ್ದರು. ಆದರೆ ಇದೀಗ ಹರೀಶ್ ರೈ ಬಾಳಲ್ಲಿ ಕ್ಯಾನ್ಸರ್ ಎಂಬ ಮಹಾಮಾರಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ.

ಅನಾರೋಗ್ಯದಿಂದ ಬಳಲುತ್ತಿರುವ ಹರೀಶ್ ರೈ ಹಣಕಾಸಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸದ್ಯ ಅವಕಾಶಗಳು ಕಮ್ಮಿಯಾಗಿದ್ದು ಮುಂದಿನ ಜೀವನದ ಬಗ್ಗೆ ಚಿಂತಿಸುವಂತಾಗಿದೆ.