• January 2, 2026

ರಾಮೋಜಿ ಫಿಲ್ಮ್ ಸಿಟಿಯಲ್ಲಿ ಮಾಫಿಯಾ ಶೂಟಿಂಗ್: ಪ್ರಜ್ವಲ್ ದೇವರಾಜ್ ಭರ್ಜರಿ ಫೈಟ್ ಸೀನ್ ಶೂಟಿಂಗ್

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಮಾಫಿಯಾ”. ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರದ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ಹೈದರಾಬಾದ್ ನ ರಾಮೋಜಿ ಫಿಲಂಸಿಟಿಯಲ್ಲಿ ಅಪಾರವೆಚ್ಚದಲ್ಲಿ, ಅದ್ದೂರಿಯಾಗಿ ನಡೆಯುತ್ತಿದೆ. ವಿನೋದ್ ಅವರ ಸಾಹಸ ಸಂಯೋಜನೆಯಲ್ಲಿ ಮೂಡಿಬರುತ್ತಿರುವ ಈ ಸಾಹಸ ಸನ್ನಿವೇಶದಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಸಹ ಕಲಾವಿದರು ಪಾಲ್ಗೊಂಡಿದ್ದಾರೆ. ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ. ಇದು ಕ್ಲೈಮ್ಯಾಕ್ಸ್ ಭಾಗದ ಸಾಹಸ ದೃಶ್ಯ. “ಮಾಫಿಯಾ” ಚಿತ್ರ ತುಂಬಾ ಚೆನ್ನಾಗಿ ಮೂಡಿ ಬರುತ್ತಿದ್ದು, ಪ್ರಜ್ವಲ್ ಅವರ ಈವರೆಗಿನ ಸಿನಿಪಯಣದ ಅತ್ಯುತ್ತಮ ಚಿತ್ರವಾಗಲಿದೆ ಎಂಬ ಭರವಸೆಯಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಹ ಸಾಕಷ್ಟು ಶ್ರಮ ವಹಿಸುತ್ತಿದ್ದಾರೆ. ಅವರ ಸಹಕಾರಕ್ಕೆ ಧನ್ಯವಾದ ಎಂದರು ನಿರ್ಮಾಪಕ ಕುಮಾರ್. ಈ ಸಾಹಸ ಸನ್ನಿವೇಶದ ನಂತರ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿರುತ್ತದೆ. ಆ ಹಾಡಿನ ಚಿತ್ರೀಕರಣವಾದರೆ ಚಿತ್ರೀಕರಣ ಮುಕ್ತಾಯವಾಗಲಿದೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now