ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಶಿವರಾಜ್ ಕುಮಾರ್ ನಟನೆಯ ‘45’ ಚಿತ್ರಕ್ಕೆ ಎಂಟ್ರಿಕೊಟ್ಟ ರಾಜ್ ಬಿ ಶೆಟ್ಟಿ
ಹೌದು. ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ತಮ್ಮದೇ ಆದ ಮ್ಯಾನರಿಸಂನಿಂದ ಗುರುತಿಸಿಕೊಂಡಿರುವ ರಾಜ್ ಬಿ ಶೆಟ್ಟಿ ಇದೀಗ 45 ಚಿತ್ರತಂಡ ಸೇರಿಕೊಂಡಿದ್ದಾರೆ. ಈ ಬಗ್ಗೆ ನಿರ್ದೇಶಕ ಅರ್ಜುನ್ ಜನ್ಯ ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈಗಾಗ್ಲೆ ಸಿನಿಮಾ ತಂಡದಲ್ಲಿ ಶಿವಣ್ಣ ಹಾಗೂ ಉಪೇಂದ್ರ ಇದ್ದು ಸಾಕಷ್ಟು ಕುತೂಹಲ ಮೂಡಿಸಿತ್ತು. ಇದೀಗ ರಾಜ್ ಬಿ ಶೆಟ್ಟಿ ಎಂಟ್ರಿ ತಂಡಕ್ಕೆ ಮತ್ತಷ್ಟು ಬಲ ನೀಡಿದೆ.
ನಿರ್ಮಾಪಕ ರಮೇಶ್ ರೆಡ್ಡಿ ತಮ್ಮ ‘ಸೂರಜ್ ಪ್ರೊಡಕ್ಷನ್ಸ್’ ಮೂಲಕ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆ. ‘45’ ಚಿತ್ರವನ್ನು ಶಿವರಾಜ್ಕುಮಾರ್ ಜನ್ಮದಿನದ ಪ್ರಯುಕ್ತ ಅನೌನ್ಸ್ ಮಾಡಲಾಗಿದ್ದು, ಸದ್ಯ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಅಲ್ಲದೆ ಡಿಸೆಂಬರ್ ತಿಂಗಳಲ್ಲಿ ಸಿನಿಮಾ ಸೆಟ್ಟೇರಲಿದೆ.
ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ತೆರೆಕಾಣಿಸಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಕೂಡ ವಹಿಸಿಕೊಂಡಿದ್ದಾರೆ.
