ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಬೆಂಗಳೂರಿಗೆ ಬಂದಿಳಿಸಿದ ರಜನಿಕಾಂತ್
ಇಂದು ಸಂಜೆ 4 ಗಂಟೆಗೆ ವಿಧಾನ ಸೌಧದ ಮುಂಭಾಗದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಜೂನಿಯರ್ ಎನ್ ಟಿ ಆರ್ ಹಾಗೂ ಸುಧಾಮೂರ್ತಿ ವಿಶೇಷ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಈಗಾಗಲೇ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ.
ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಆರೋಗ್ಯ ಸಚಿವ ಸುಧಾಕರ್ ತಲೈವ ಅವರನ್ನು ಬರಮಾಡಿಕೊಂಡಿದ್ದಾರೆ.
ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಸುಧಾಕರ್ ಹಾಗೂ ಮುನಿರತ್ನ ಹೂಗುಚ್ಚ ನೀಡಿ ಭರಮಾಡಿಕೊಂಡಿದ್ದು ಸದ್ಯ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
