• June 13, 2026

ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ನೋಡಬೇಡಿ: ನಟ ಸೋನು ಸೂದ್ ಮನವಿ

ಬಾಲಿವುಡ್ ನಟ ಸೋನು ಸೂದ್ ರೀಲ್ ಜೊತೆಗೆ ರಿಯಲ್ ಹೀರೋ ಆಗಿಯೂ ಸಾಕಷ್ಟು ಹೆಸರು ಮಾಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸಾವಿರಾರು ಮಂದಿಗೆ ಸಹಾಯ ಹಸ್ತ ಚಾಚಿದ್ದ ಸೋನು ಸೂದ್ ನೊಂದವರ ಬಾಳಿಗೆ ಬೆಳಕಾಗಿದ್ದಾರೆ. ಇದೀಗ ಸೋನು ಅಭಿಮಾನಿಗಳೊಂದಿಗೆ ಮನವಿ ಮಾಡಿಕೊಂಡಿದ್ದು ವಿದ್ಯಾರ್ಥಿಗಳ ಖಾಸಗಿ ವಿಡಿಯೋವನ್ನು ನೋಡಬೇಡಿ ಹಾಗೂ ಶೇರ್ ಮಾಡಬೇಡಿ ಎಂದಿದ್ದಾರೆ. ಚಂಡೀಗಡ ವಿಶ್ವ ವಿದ್ಯಾಲಯದ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯೋರ್ವಳು ಉಳಿದ ವಿದ್ಯಾರ್ಥಿಗಳ ಖಾಸಗಿ ವಿಡಿಯೋವನ್ನು ಲೀಕ್ ಮಾಡಿದ್ದಾಳೆ. ವಿದ್ಯಾರ್ಥಿಗಳ ಹಾಸ್ಟೆಲ್ ನಲ್ಲಿ ಸ್ನಾನ ಮಾಡುವ ವಿಡಿಯೋ ಮಾಡಿರುವ ವಿದ್ಯಾರ್ಥಿನಿ ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾಳೆ. ಜೊತೆಗೆ ಇನ್ನೂ 60 ಹುಡುಗಿಯರ ವಿಡಿಯೋ ಇದೆ ಎಂದು ಹೇಳಿ ದೊಡ್ಟ ಆತಂಕ ಸೃಷ್ಟಿ ಮಾಡಿದ್ದಾಳೆ. ಘಟನೆ ನಡೆಯುತ್ತಿದ್ದಂತೆ ವಿವಿ ಆವರಣದಲ್ಲಿ ದೊಡ್ಡ ಪ್ರತಿಭಟನೆ ನಡೆಯುತ್ತಿದೆ. ಈಗಾಗ್ಲೆ ವಿದ್ಯಾರ್ಥಿನಿಯನ್ನು ಬಂಧಿಸಿದ್ದು ಆಕೆಯ ಬಾಯ್ ಫ್ರೆಂಡ್ ನನ್ನು ಪೊಲೀಸರು ಬಂಧಿಸಿದ್ದಾರೆ. ವೀಡಿಯೋ ಬಗ್ಗೆ ತಿಳಿಯುತ್ತಿದ್ದಂತೆ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿಯರು ಆಕ್ರೋಶ ಹೊರ ಹಾಕಿದ್ದು ಸಾಕಷ್ಟು ಕಂಗಲಾಗಿದ್ದಾರೆ. ಅಲ್ಲದೆ ವಿದ್ಯಾರ್ಥಿನಿಯೊಬ್ಬಳು ತಲೆ ತಿರುಗಿ ಬಿದ್ದಿದ್ದಾಳೆ. ಈ ವಿಷಯ ತಿಳಿಯುತ್ತಿದ್ದಂತೆಯೇ ನಟ ಸೋನು ಸೋದ್ ನೊಂದ ವಿದ್ಯಾರ್ಥಿನಿಯರ ಬೆನ್ನಿಗೆ ನಿಂತಿದ್ದಾರೆ. ಅಲ್ಲದೇ, ಇಂತಹ ಯಾವುದೇ ವಿಡಿಯೋಗಳನ್ನು ನೋಡಬೇಡಿ ಮತ್ತು ಇತರರಿಗೆ ಕಳುಹಿಸಬೇಡಿ ಎಂದು ಸೋನು ಸೂದ್ ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಕೃತ್ಯವನ್ನು ಖಂಡಿಸಿದ್ದು, ಹೀನ ಮನಸ್ಥಿತಿಯವರನ್ನು ಸುಮ್ಮನೆ ಬಿಡಬೇಡಿ ಎಂದು ಮನವಿ ಮಾಡಿದ್ದಾರೆ. ಜೊತೆಗೆ ಹೆಣ್ಣು ಮಕ್ಕಳಿಗೆ ಗೌರವವನ್ನು ಕೊಡಿ ಎಂದು ಮನವಿ ಮಾಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now