• January 2, 2026

ದರ್ಶನ್ ಗೆ ಜೋಡಿಯಾದ ಕನಸಿನ ರಾಣಿ ಮಾಲಾಶ್ರೀ ಪುತ್ರಿ

ಕ್ರಾಂತಿ ಸಿನಿಮಾದ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 56ನೇ ಸಿನಿಮಾದಲ್ಲಿ ಕಾಣಿಸಿಕೊಳ್ತಿದ್ದಾರೆ. ಇದುವರೆಗೂ ದರ್ಶನ್ ಗೆ ಜೋಡಿಯಾಗಿ ಯಾರು ಕಾಣಿಸಿಕೊಳ್ತಾರೆ ಅನ್ನೋ ಕುತೂಹಲ ಕ್ರಿಯೇಟ್ ಆಗಿತ್ತು. ಇದೀಗ ದರ್ಶನ್ ಗೆ ಜೋಡಿಯಾಗುವ ಮೂಲಕ ಹೊಸ ನಾಯಕಿಯೊಬ್ಬರು ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟಿದ್ದಾರೆ. ಕನಸಿನ ರಾಣಿಯಾಗಿ ಸ್ಯಾಂಡಲ್ ವುಡ್ ನಲ್ಲಿ ಮಿಂಚು ಹರಿಸಿದ್ದ ನಟಿ ಮಾಲಾಶ್ರೀ ಪುತ್ರಿ ರಾಧನಾ ರಾಮ್ ದರ್ಶನ್ ಗೆ ಜೋಡಿಯಾಗೋ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಬಹುಭಾಷಾ ನಟಿಯಾಗಿ ಬಣ್ಣದ ಬದುಕಿನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮಾಲಾಶ್ರೀ ಪುತ್ರಿಯೂ ಇದೀಗ ಬಣ್ಣದ ಲೋಕದಲ್ಲಿ ಸಂಚಲನ ಮೂಡಿಸೋಕೆ ರೆಡಿಯಾಗಿದ್ದಾರೆ. ರಾಕ್‌ಲೈನ್ ವೆಂಕಟೇಶ್ ನಿರ್ಮಾಣದ ಮತ್ತು ತರುಣ್ ಕಿಶೋರ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಸಿನಿಮಾದಲ್ಲಿ ರಾಧನಾ ರಾಮ್ ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ. ಸದ್ಯ ಚಿತ್ರದ ರಾಧನಾ ಲುಕ್ ಕೂಡ ರಿವೀಲ್ ಆಗಿದ್ದು, ನಟಿಯ ಲುಕ್ ಅಭಿಮಾನಿಗಳು ಮನ ಸೋತಿದ್ದಾರೆ. ತಮ್ಮ ಮೊದಲ ಚಿತ್ರದಲ್ಲಿಯೇ ಪವರ್‌ಫುಲ್ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದು, ತಾಯಿಯಂತೆ ಮಗಳು ಕೂಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now