• June 4, 2026

ನಿರ್ಮಾಪಕಿಯಾದ ನಟಿ ಮೇಘನಾ ರಾಜ್

ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಮತ್ತೆ ಸಿನಿಮಾ ಇಂಡಸ್ಟ್ರಿಯಲ್ಲಿ ಬ್ಯುಸಿಯಾಗಿದ್ದಾರೆ. ಕೆಲ ಸಮಯದಿಂದ ಬಣ್ಣದ ಬದುಕಿನಿಂದ ದೂರ ಉಳಿದಿದ್ದ ಮೇಘನಾ ಇದೀಗ ಕಿರುತೆರೆ ಜೊತೆಗೆ ಹಿರಿತೆರೆಯಲ್ಲೂ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ನಟಿ ಮೇಘನಾ ರಾಜ್ ನಿರ್ಮಾಪಕಿಯಾಗಿಯೂ ಗುರುತಿಸಿಕೊಳ್ತಿದ್ದಾರೆ. ಚಿರಂಜೀವಿ ಸರ್ಜಾ ನಿಧನದ ಬಳಿಕ ಸಿನಿಮಾ ರಂಗದಿಂದ ದೂರವೇ ಉಳಿದಿದ್ದ ನಟಿ ಮೇಘನಾ ರಾಜ್ ಮಗನ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ರು.  ಈ ಮಧ್ಯೆ ಮಗ ಕೊಂಚ ದೊಡ್ಡವನಾಗಿದ್ದು ಹೀಗಾಗಿ ಮತ್ತೆ ಬಣ್ಣದ ಬದುಕಿನತ್ತ ಮುಖ ಮಾಡಿದ್ದಾರೆ. ಈಗಾಗ್ಲೆ ಖಾಸಗಿ ವಾಹಿನಿಯೊಂದಲ್ಲಿ ರಿಯಾಲಿಟಿ ಶೋ ಜಡ್ಜ್ ಆಗಿರುವ ಮೇಘನಾ ರಾಜ್ ಈ ಮಧ್ಯೆ ಕಾಂತ ಕಣ್ಣಲಿ ನಿರ್ದೇಶನದ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜೊತೆ ಮೇಘನಾ ರಾಜ್ ಮಹಿಳಾ ಪ್ರಧಾನ ಸಿನಿಮಾವೊಂದರಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಕಳೆದ ವರ್ಷ ಪನ್ನಗಾಭರಣ, ವಿಶಾಲ್ ಮತ್ತು ವಾಸುಕಿ ವೈಭವ್ ಜೊತೆಗಿರುವ ಫೋಟೋವೊಂದನ್ನು ಶೇರ್ ಮಾಡಿದ್ದ ಮೇಘನಾ ರಾಜ್ ಒಟ್ಟಿಗೆ ಸಿನಿಮಾ ಮಾಡುತ್ತಿರುವುದಾಗಿ ಹೇಳಿದ್ದರು. ಇತ್ತೀಚೆಗೆ ಮತ್ತೊಂದು ಫೋಟೋ ಶೇರ್ ಮಾಡಿ ಚಿತ್ರವನ್ನು ವಿಶಾಲ್ ನಿರ್ದೇಶನ ಮಾಡುತ್ತಿದ್ದು, ಪನ್ನಗಾಭರಣ ನಿರ್ಮಾಪಕರು ಎಂದು ಹೇಳಿದ್ದರು. ಇದೀಗ ಈ ಸಿನಿಮಾಗೆ ಮೇಘನಾ ಕೂಡ ಬಂಡವಾಳ ಹೂಡುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಚಿತ್ರದಲ್ಲಿ ಮೇಘನಾ ರಾಜ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಾಂತ ಕನ್ನಲಿ ನಿರ್ದೇಶನದ ಸಿನಿಮಾದ ಕಂಪ್ಲೀಟ್ ಆದ ಬಳಿಕ ಹೊಸ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now