• January 1, 2026

ಮನೆಗೆ ಮಕ್ಕಳು ಬಂದ ಖುಷಿಯಲ್ಲಿರುವ ನಯನತಾರ, ವಿಘ್ನೇಶ್: ತನಿಖೆಗೆ ಆದೇಶಿಸಿದ ತಮಿಳುನಾಡು ಸರ್ಕಾರ

ಕಳೆದ ನಾಲ್ಕು ತಿಂಗಳ ಹಿಂದೆ ನಿರ್ದೇಶಕ ವಿಘ್ನೇಶ್ ಶಿವನ್ ಕೈ ಹಿಡಿದ ನಟಿ ನಯನತಾರಾ ಇದೀಗ ಬಾಡಿಗೆ ತಾಯಿಯ ಮೂಲಕ ಅವಳಿ ಗಂಡು ಮಕ್ಕಳನ್ನು ಪಡೆದಿದ್ದಾರೆ. ತಾವು ಫೋಷಕರಾಗುತ್ತಿರುವ ಕುರಿತು ವಿಘ್ನೇಶ್ ಶಿವನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಮನೆಗೆ ಮಕ್ಕಳು ಬಂದ ಖುಷಿಯಲ್ಲಿರುವ ದಂಪತಿಗಳಿಗೆ ತಮಿಳು ನಾಡು ಸರ್ಕಾರ ಶಾಕ್ ನೀಡಿದೆ. ಬಾಡಿಗೆ ತಾಯ್ತನದ ಕುರಿತು ಸರಕಾರವು ಹಲವು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನಯನತಾರಾ ಮತ್ತು ವಿಘ್ನೇಶ್ ಶಿವನ್ ಗಾಳಿಗೆ ತೂರಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ ತಮಿಳು ನಾಡು ಸರಕಾರ ಈ ಪ್ರಕರಣದಲ್ಲಿ ತನಿಖೆಗೆ ಆದೇಶಿಸಿದೆ. ಜೂನ್ ತಿಂಗಳಲ್ಲಿ ತಮಿಳುನಾಡಿನ ಮಹಾಬಲಿಪುರಂ ರೆಸಾರ್ಟ್ ನಲ್ಲಿ ವಿಘ್ನೇಶ್ ಶಿವನ್ ಹಾಗೂ ನಯನತಾರ ಅದ್ದೂರಿಯಾಗಿ ಹಸೆಮಣೆ ಏರಿದ್ದರು. ಆದರೆ ಮದುವೆಗೂ ಮೊದಲೇ ಈ ಜೋಡಿಗಳು ಬಾಡಿಗೆ ತಾಯಿಯಾಗುವ  ಪ್ಲಾನ್ ಮಾಡಿದ್ದರು. ಆದರೆ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲೇ ಬಾಡಿಗೆ ತಾಯ್ತನ ನಿಯಂತ್ರಣ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಬಾಡಿಗೆ ತಾಯ್ತನ ನಿಯಂತ್ರಣ ಕಾಯ್ದೆಯ ಪ್ರಕಾರ ಬಾಡಿಗೆ ತಾಯಿ ಆರೋಗ್ಯವಾಗಿರಬೇಕು, ಆಕೆಯ ವಯಸ್ಸು 21-35ರ ಅಂತರದಲ್ಲಿ ಇರಬೇಕು. ಒಂದೇ ಸಲ ಬಾಡಿಗೆ ತಾಯಿ ಆಗಲು ಸಾಧ್ಯ ಹಾಗೂ ವಾಣಿಜ್ಯ ಬಾಡಿಗೆ ತಾಯ್ತನದ ಮೇಲೆ ನಿರ್ಬಂಧ ಹೇರಲಾಗಿದೆ. ಆದರೆ ಇವುಗಳನ್ನು ನಯನತಾರ ಹಾಗೂ ವಿಘ್ನೇಶ್ ಶಿವನ್ ದಂಪತಿ ಗಾಳಿಗೆ ತೂರಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ತನಿಖೆಗೆ ಆದೇಶ ನೀಡಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now