• December 22, 2025

ಬೆಂಗಳೂರಿನ ಮಳೆ ಅವಾಂತರಕ್ಕೆ ಸಿಡಿದೆದ್ದ ನಟಿ ರಮ್ಯಾ

ಮಳೆ ಶುರುವಾಯ್ತು ಎಂದರೆ ಬೆಂಗಳೂರಿನ ಮಂದಿ ಬೆಚ್ಚಿ ಬೀಳುತ್ತಾರೆ. ರಸ್ತೆಗಳು ನದಿಗಳಾಗುತ್ತವೆ, ಮನೆಗಳು ಕೆರೆಗಳಾಗುತ್ತವೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ಜನ ಜೀವನ ಅಲ್ಲೋಲ ಕಲ್ಲೋಲವಾಗಿದೆ. ಈ ಬಗ್ಗೆ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಅಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರಿನಲ್ಲಿ ಸಣ್ಣದೊಂದು ಜಾಗ ಸಿಕ್ಕಿದ್ರೆ ಸಾಕು ಅನ್ನೋ ಪರಿಸ್ಥಿತಿ ನಿರ್ಮಾಣವಾಗಿದೆ. ಅದ್ರಲ್ಲೂ ಸಾಕಷ್ಟು ಕಡೆಗಳಲ್ಲಿ ಅಕ್ರಮ ಕಟ್ಟಡಗಳು ತಲೆ ಎತ್ತಿ ನಿಂತಿವೆ. ಇಂಥಹ ಅಕ್ರಮ ಕಟ್ಟಡಗಳಿಂದಲೇ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿದೆ ಎಂಬ ಆರೋಪ ಕೇಳೀ ಬರುತ್ತಿದೆ. ಮತ್ತೊಂದಡೆ ಕಳೆದ 51 ವರ್ಷಗಳಲ್ಲಿ ಇಷ್ಟು ದೊಡ್ಡ ಪ್ರಮಾಣದ ಮಳೆಯಾಗಿದ್ದು ಮಳೆಯ ಬಳಿಕ ಬೆಂಗಳೂರಿನ ಚಿತ್ರಣವೇ ಬದಲಾಗಿದೆ ಬಿಟ್ಟಿದೆ. ಇತ್ತ ಮೋಹಕ ತಾರೆ ರಮ್ಯಾ ಫೋಟೋ ಶೇರ್ ಮಾಡಿ ಕಿಡಿ ಕಾರಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿರುವ ರಮ್ಯಾ ಅವಾಂತರಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಲೆ ಇರುತ್ತಾರೆ. ಇದೀಗ ಮಳೆಯಿಂದ ಉಂಟಾದ ಸಮಸ್ಯೆಗಳ ವಿರುದ್ಧ ಸಿಡಿದೆದ್ದಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ಕಿಡಿ ಕಾರಿದ್ದು ಫೋಟೋ ಕೂಡ ಶೇರ್ ಮಾಡಿದ್ದಾರೆ. ಮಳೆ ನೀರಿನಿಂದ ತುಂಬಿಕೊಂಡಿರುವ ರಸ್ತೆಯಲ್ಲಿ ಪ್ರಯಾಣಿಕರು ಪ್ರಯಾಣಿಸಲು ಹರಸಾಹಸ ಪಡುತ್ತಿರುವ ಫೋಟೋವನ್ನು ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸ್ಮಾರ್ಟ್ ಸಿಟಿ ಬೆಂಗಳೂರು ಎಂದು ಹಾಸ್ಯ ಮಾಡಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ಎದ್ದು ನಿಂತಿರುವ ಅಕ್ರಮ ಕಟ್ಟಡ ತೆರವುಗೊಳಿಸುವವರಿಗೆ ನನ್ನ ಮತ ಎಂದು ಬರೆದುಕೊಂಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now