• June 4, 2026

ಧನ್ವೀರ್ ಗೌಡನಿಗೆ ಜೋಡಿಯಾದ ರೀಷ್ಮಾ ನಾಣಯ್ಯ

ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ ಸಾಲು ಸಾಲು ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ತಿದ್ದಾರೆ. ಮೊದಲ ಚಿತ್ರದಲ್ಲೇ ಭರವಸೆ ಮೂಡಿಸಿದ ರೀಷ್ಮಾ ಇದೀಗ ದನ್ವೀರ್ ಗೆ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಬೈ ಟು ಲವ್ ಸಿನಿಮಾದ ಬಳಿಕ ದನ್ವೀರ್ ಮಾವನ ಸಿನಿಮಾದಲ್ಲಿ ನಟಿಸುತ್ತಿದ್ದ ಭರದಿಂದ ಚಿತ್ರೀಕರಣ ನಡೆಯುತ್ತಿದೆ. ಶಂಕರ್ ರಾಮನ್ ನಿರ್ದೇಶನದ ಮಾವನ ಸಿನಿಮಾಗೆ ಇದೀಗ ರೀಷ್ಮಾ ನಾಣಯ್ಯ ಎಂಟ್ರಿಕೊಟ್ಟಿದ್ದಾರೆ. ಈಗಾಗ್ಲೆ ರೀಷ್ಮಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಸಿನಿಮಾದಲ್ಲಿ ಸದಾ ಹಸನ್ಮುಖಿಯಾಗಿರುವ ಪಾತ್ರದಲ್ಲಿ ರೀಷ್ಮಾ ನಾಣಯ್ಯ ಕಾಣಿಸಿಕೊಳ್ಳುತ್ತಿದ್ದು, ನಾಯಕನ ಪಯಣದಲ್ಲಿ ನಾಯಕಿ ಹೇಗೆ ಬೆಂಬಲವಾಗಿ ನಿಲ್ಲುತ್ತಾಳೆ ಅನ್ನೋದನ್ನು ಸಿನಿಮಾದಲ್ಲಿ ನೋಡಬಹುದಾಗಿದೆ. ಚೇತನ್ ಕುಮಾರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ವಾಮನ ಸಿನಿಮಾದಲ್ಲಿ ಈಗಾಗ್ಲೆ ಧನ್ವೀರ್ ರ ಫಸ್ಟ್ ಲುಕ್ ಹಾಗೂ ಮೇಕಿಂಗ್ ಝಲಕ್ ಸಾಕಷ್ಟು ಪ್ರೋಮಿಸಿಂಗ್ ಆಗಿದೆ. ಸದ್ಯದಲ್ಲೇ ಸಿನಿಮಾ ತಂಡದಿಂದ ಮತ್ತಷ್ಟು ಮಾಹಿತಿ ಹೊರ ಬೀಳಲಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now