• February 10, 2026

ಸ್ಟಂಟ್ ಮಾಡುವ ವೇಳೆ ಅವಘಡ: ಕಾಲು ಮುರಿದುಕೊಂಡ ಶಿಲ್ಪಾ ಶೆಟ್ಟಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಪೆಟ್ಟು ಮಾಡಿಕೊಂಡಿದ್ದಾರೆ. ಸ್ಟಂಟ್ಸ್ ಮಾಡುವ ವೇಳೆ ಈ ಅವಘಡ ಸಂಭವಿಸಿದ್ದು ಸದ್ಯ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಬಿಟೌನ್ ಬ್ಯೂಟಿ ನಟಿ ಶಿಲ್ಪಾ ಶೆಟ್ಟಿ ಇಂದಿಗೂ ಬೇಡಿಕೆ ಉಳಿಸಿಕೊಂಡಿದ್ದಾರೆ. ರಿಯಾಲಿಟಿ ಶೋ ಜೊತೆಗೆ ಸಿನಿಮಾಗಳಲ್ಲೂ ಶಿಲ್ಪಾ ಬ್ಯುಸಿಯಾಗಿದ್ದಾರೆ. ಸದ್ಯ ಶಿಲ್ಪಾ ಶೆಟ್ಟಿ, ಹೊಸ ಪ್ರಾಜೆಕ್ಟ್ `ಇಂಡಿಯನ್ ಪೊಲೀಸ್ ಫೋರ್ಸ್’ ವೆಬ್ ಸಿರೀಸ್‌ನ ಚಿತ್ರೀಕರಣದ ಸಂದರ್ಭದಲ್ಲಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದು ಚಿಕಿತ್ಸೆ ಪಡೆದಿದ್ದಾರೆ. ಕಾಲಿಗೆ ಬ್ಯಾಡೇಜ್ ಹಾಕಿಕೊಂಡು ವೀಲ್ ಚೇರ್ ಮೇಲೆ ಕುಳಿತಿರುವ ಫೋಟೋ ಶೇರ್ ಮಾಡಿರುವ ಶಿಲ್ಪಾ ಶೆಟ್ಟಿ ಶೂಟಿಂಗ್ ಸಂದರ್ಭದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ನಿರ್ದೇಶಕರು ರೋಲ್, ಕ್ಯಾಮೆರಾ, ಆ್ಯಕ್ಷನ್ ಎಂದರು. ನನ್ನ ಕಾಲು ಮುರಿಯಿತು. ಆರು ವಾರ ವಿಶ್ರಾಂತಿ ಪಡೆಯುತ್ತಿದ್ದೇನೆ. ಬಳಿಕ ಮತ್ತೆ ಶೂಟಿಂಗ್‌ಗೆ ಮರಳಲಿದ್ದೇನೆ ಎಂದು ಶಿಲ್ಪಾ ಶೆಟ್ಟಿ ಬರೆದುಕೊಂಡಿದ್ದಾರೆ. ಶಿಲ್ಪಾ ಶೆಟ್ಟಿ ಆದಷ್ಟು ಭೇಗ ಗುಣಮುಖರಾಗಲಿ ಅಂತ ಅಭಿಮಾನಿಗಳು ಆಶಿಸುತ್ತಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now