• March 18, 2026

‘ಆದಿಪುರುಷ’ ಚಿತ್ರತಂಡದ ಮೇಲೆ ಕೇಸ್: ಪ್ರಭಾಸ್, ಸೈಫ್ ಅಲಿ ಖಾನ್ ಗೆ ಕಾನೂನು ಸಂಕಷ್ಟ

ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ನಟನೆಯ ಆದಿಪುರುಷ ಸಿನಿಮಾದ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಇತ್ತೀಚೆಗೆ ಬಿಡುಗಡೆ ಆದ ಚಿತ್ರದ ಟ್ರೈಲರ್ ಪ್ರತಿಯೊಬ್ಬರ ನಿರೀಕ್ಷೆಗಳನ್ನು ಹುಸಿಯಾಗಿಸಿದೆ. ಅಯೋದ್ಯೆಯಲ್ಲಿ ಅದ್ದೂರಿಯಾಗಿ ಟ್ರೈಲರ್ ರಿಲೀಸ್ ಆದ ಆದಿಪುರುಷ ಟ್ರೈಲರ್ ನೋಡಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ನಾನಾ ಕಾರಣಗಳಿಂದ ಸಾಕಷ್ಟು ಸದ್ದು ಮಾಡಿದ್ದ ಆದಿಪುರುಷ ಸಿನಿಮಾದ ಗ್ರಾಫಿಕ್ಸ್ ನೋಡಿ ಅಭಿಮಾನಿಗಳು ಕಣ್ಣು ಕೆಂಪಗೆ ಮಾಡಿಕೊಂಡಿದ್ದಾರೆ. ಚಿತ್ರದಲ್ಲಿ ರಾಮ, ಸೀತೆ, ಆಂಜನೇಯ, ರಾವಣ ಸೇರಿದಂತೆ ಪ್ರತಿಯೊಬ್ಬರನ್ನು ಕೆಟ್ಟದಾಗಿ ತೋರಿಸಲಾಗಿದೆ. ಜೊತೆಗೆ ಕಳಪೆ ಗುಣಮಟ್ಟದ ಗ್ರಾಫಿಕ್ಸ್ ಬಳಸಲಾಗಿದೆ ಎಂಬ ಕಾರಣಕ್ಕೆ ಆದಿಪುರುಷ ಸಿನಿಮಾದ ಮೇಲೆ ಅಭಿಮಾನಿಗಳು ಬೇಸರಿಸಿಕೊಂಡಿದ್ದರು. ಇದೀಗ ಚಿತ್ರತಂಡಕ್ಕೆ ಕಾನೂನಿನ ಸಂಕಷ್ಟವು ಎದುರಾಗಿದೆ. ಆದಿಪುರುಷ್ ಸಿನಿಮಾದಲ್ಲಿ ರಾಮ, ರಾವಣ ಸೇರಿದಂತೆ ಹಲವು ಪಾತ್ರಗಳನ್ನು ನೈಜವಾಗಿ ತೋರಿಸಿಲ್ಲ. ಆ ಪಾತ್ರಗಳಿಗೆ ಅವಮಾನ ಮಾಡಲಾಗಿದೆ ಎಂದು ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಅಕ್ಟೋಬರ್ 27ರಂದು ವಿಚಾರಣೆ ನಡೆಸಲು ತೀರ್ಮಾನಿಸಿದೆ. ಆದಿಪುರುಷ ಚಿತ್ರದ ನಟ ಪ್ರಭಾಸ್, ನಟ ಸೈಫ್ ಅಲಿ ಖಾನ್, ನಿರ್ದೇಶಕ ಓಂ ರಾವತ್ ಸೇರಿದಂತೆ ಒಟ್ಟು ಐವರ ಮೇಲೆ ಕೇಸ್ ದಾಖಲು ಮಾಡಲಾಗಿದೆ. ಇತ್ತೀಚೆಗೆ ಪ್ರಭಾಸ್ ನಟನೆಯ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಫ್ಲ್ಯಾಪ್ ಪಟ್ಟಿಗೆ ಸೇರ್ಪಡೆಯಾಗುತ್ತಿವೆ. ಸಾಹೋ’ ಹಾಗೂ ‘ರಾಧೆ ಶ್ಯಾಮ್​’ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಮಾಡಿಲ್ಲ. ಹೀಗಾಗಿ ಆದಿಪುರುಷ ಚಿತ್ರದ ಗೆಲುವಿನ ಅವಶ್ಯಕತೆ ಪ್ರಭಾಸ್ ಗೆ ಇದೆ. ಆದರೆ ಈ ಚಿತ್ರ ಬಿಡುಗಡೆಗೂ ಮುನ್ನವೇ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now